ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ,ಮಹಾರಾಷ್ಟ್ರದಲ್ಲಿ ಮಳೆ: ಡ್ಯಾಂನಲ್ಲಿ ಎಷ್ಟು ನೀರಿದೆ?

By Ashwath
|
Google Oneindia Kannada News

ಬೆಂಗಳೂರು, ಜು.25: ಮಹಾರಾಷ್ಟ್ರದ ಭಾರೀ ಮಳೆಯಾಗುತ್ತಿದ್ದು , ಅಲ್ಲಿನ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ಕೃಷ್ಣ ನದಿಗೆ ಹರಿಸಿದ್ದರಿಂದ ಬೆಳಗಾವಿಯಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಶಿವಮೊಗ್ಗ, ಉತ್ತರ ಕನ್ನಡ ದಲ್ಲಿ ಮಳೆ ಮುಂದುವರೆದಿದ್ದು, ಕೊಡಗು, ಕರಾವಳಿಯಲ್ಲಿ ಮಳೆ ಇಳಿಮುಖವಾಗಿದೆ.

ಬೆಳಗಾವಿ ವರದಿ: ರಾಜಾಪುರ ಬ್ಯಾರೇಜ್‌ನಿಂದ 1,16,591 ಕ್ಯೂಸೆಕ್‌ ಹಾಗೂ ದೂಧಗಂಗಾ ನದಿಯಿಂದ 21,472 ಕ್ಯೂಸೆಕ್‌ ನೀರು ಸೇರಿದಂತೆ 1,38,063 ಕ್ಯೂಸೆಕ್‌ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿಗಳು ತುಂಬಿ ಹರಿಯುತ್ತಿದೆ. ಚಿಕ್ಕೋಡಿ ತಾಲೂಕಿನ 8 ಸೇತುವೆಗಳು ಜಲಾವೃತಗೊಂಡಿವೆ. ಶುಕ್ರವಾರ ಮಹಾರಾಷ್ಟ್ರದಿಂದ ಸುಮಾರು 2 ಲಕ್ಷ ಕ್ಯೂಸೆಕ್‌ ನೀರು ಬಿಡುಗಡೆಯಾಗುವ ಸಂಭವವಿದ್ದು, ನದಿಗಳ ಒಳಹರಿವು ಇನ್ನೂ ಹೆಚ್ಚುವ ಸಾಧ್ಯತೆ ಇದೆ.

krs dam

ಶಿವಮೊಗ್ಗ ವರದಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಸಾಗರ ತಾಲ್ಲೂಕಿನಲ್ಲಿ ವರದಾ ನದಿ ಪ್ರವಾಹದದಿಂದ ಸಾಕಷ್ಟು ಕೃಷಿ ಭೂಮಿ ಜಲಾವೃತವಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ 53,478 ಕ್ಯುಸೆಕ್‌ ನೀರು ಹರಿದುಬರುತ್ತಿದೆ. ಭದ್ರಾ ಜಲಾಶಯಕ್ಕೆ 29, 800 ಕ್ಯುಸೆಕ್‌ ನೀರು ಹರಿದುಬರುತ್ತಿದ್ದು, ನೀರನ್ನು 12 ಗೇಟ್‌ಗಳ ಮೂಲಕ ನದಿಗೆ ಬಿಡಲಾಗುತ್ತಿದೆ.

ಚಿಕ್ಕಮಗಳೂರು ವರದಿ: ಜಿಲ್ಲೆಯ ಶೃಂಗೇರಿ, ಜಯಪುರ ಸುತ್ತ­ಮುತ್ತ ಭಾರಿ ಮಳೆಯಾಗುತ್ತಿದ್ದು ಕಾಫಿ ತೋಟಕ್ಕೆ ಹಾನಿಯಾಗಿದೆ. ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.

ಕೊಡಗು ವರದಿ: ನಾಲ್ಕು ದಿನಗಳಿಂದ ಹೆಚ್ಚಾಗಿದ್ದ ಮಳೆ ಗುರುವಾರ ಕಡೆಮೆಯಾಗಿದೆ. ಹಾರಂಗಿ ಡ್ಯಾಂಗೆ 17825 ಕ್ಯೂಸೆಕ್ ನೀರು ಹರಿದು ಬರುತ್ತಿದ್ದರೆ, 15,423 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ.

ಮಂಗಳೂರು ವರದಿ: ಕರಾವಳಿ ಭಾಗದಲ್ಲಿ ಮಳೆ ಕಡಿಮೆಯಾಗಿದೆ.

ಭಾರೀ ಮಳೆ: ಯಾವ ಜಲಾಶಯದಲ್ಲಿ ಎಷ್ಟು ನೀರಿದೆ?
ಜಲಾಶಯ ಗರಿಷ್ಠ ಮಟ್ಟ ಇಂದಿನ ನೀರಿನ ಮಟ್ಟ ಕಳೆದ ವರ್ಷದ ಮಟ್ಟ ಒಳ ಹರಿವು ಹೊರ ಹರಿವು
ಲಿಂಗನಮಕ್ಕಿ 1819 1781.20 1802.60 53,478 ----
ತುಂಗಾಭದ್ರಾ 1633 1614.67 1617.34 75,818 2333
ಹಾರಂಗಿ 2,859 2856.83 2854.01 17,825 15423
ಕೆಆರ್‌ಎಸ್‌‌ 124 108.50 114 6610 6917
ಆಲಮಟ್ಟಿ 519 .600 ಮೀ. 515.20 ಮೀ. 518.25 ಮೀ. 1,09,927 ----

*ನೀರಿನ ಮಟ್ಟ ಅಡಿಗಳಲ್ಲಿ
*ಒಳ ಹರಿವು ,ಹೊರಹರಿವು ಕ್ಯೂಸೆಕ್‌ ಲೆಕ್ಕದಲ್ಲಿ

ಕ್ಯೂಸೆಕ್‌ ಮತ್ತು ಟಿಎಂಸಿ ಎಂದರೆ ಎಷ್ಟು?

ಕ್ಯೂಸೆಕ್ ಎಂಬುದು Cubic feet per Secondನ ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಆಗಲಿದೆ.

English summary
Heavy rain in Shimoga, Belagavi districts on, Thursday July 25. Monsoon has made a good progress in Shimoga and Kodagu resulting in some water inflow in dams.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X