ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆಗೆ ಜೆಡಿಎಸ್ ಸ್ಪರ್ಧೆ ಇಲ್ಲ?

|
Google Oneindia Kannada News

ಬೆಂಗಳೂರು, ಜು. 30 : ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಪಕ್ಷಗಳು ಬಿರುಸಿನ ತಯಾರಿ ನಡೆಸುತ್ತಿವೆ. ಆದರೆ, ಜೆಡಿಎಸ್ ಮಾತ್ರ ಮೌನ ವಹಿಸಿದ್ದು ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ತೀರ್ಮಾನಿಸಿದ್ದಾರೆ. ಆದರೆ, ಈ ಕುರಿತು ಬುಧವಾರ ಸಂಜೆ ಅಂತಿಮ ನಿರ್ಧಾರ ಪ್ರಕಟಗೊಳ್ಳುವ ನಿರೀಕ್ಷೆಯಿದೆ.

HD Deve Gowda

ಶಿಕಾರಿಪುರ, ಬಳ್ಳಾರಿ ಗ್ರಾಮಾಂತರ ಮತ್ತು ಚಿಕ್ಕೋಡಿ-ಸದಲಗಾ ಕ್ಷೇತ್ರಗಳ ಉಪ ಚುನಾವಣೆ ಆ.21ರಂದು ನಡೆಯಲಿದೆ. ಈ ಚುನಾವಣಾ ಫಲಿತಾಂಶದಿಂದ ಮಹತ್ವದ ರಾಜಕೀಯ ಬೆಳವಣಿಗೆಗಳು ಆಗದ ಕಾರಣ ತಟಸ್ಥವಾಗಿರಲು ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. [ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಗಳು ಅಂತಿಮ]

ಶಿಕಾರಿಪುರ ಕ್ಷೇತ್ರದಲ್ಲಿ 2013ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಚ್.ಟಿ.ಬಳಿಗಾರ್ 15 ಸಾವಿರ ಮತಗಳನ್ನು ಪಡೆದಿದ್ದರು. ಆದ್ದರಿಂದ ಆ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಸೊರಬ ಶಾಸಕ ಮಧು ಬಂಗಾರಪ್ಪ ಎಚ್.ಡಿ.ದೇವೇಗೌಡರಿಗೆ ಮನವಿ ಮಾಡಿದ್ದಾರೆ. [ಶಿಕಾರಿಪುರ ಕ್ಷೇತ್ರದತ್ತ ಗೂಳಿಹಟ್ಟಿ ಶೇಖರ್]

ಬುಧವಾರ ಸಂಜೆ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಸಭೆ ನಡೆಸಲಿದ್ದು, ಸಭೆಯಲ್ಲಿ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಸೋಮವಾರ ವಿಧಾನಸೌಧದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಜೆಡಿಎಸ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತದೆಯೇ? ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

English summary
The Janata Dal (Secular) (JDS)would remain neutral in the three Constituencies by election. Three Constituencies assembly by-election scheduled on August 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X