ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸದನದಲ್ಲಿ ಸಹನೆ ಕಳೆದುಕೊಂಡ ಗೃಹ ಸಚಿವ ಜಾರ್ಜ್

|
Google Oneindia Kannada News

ಬೆಂಗಳೂರು, ಜು. 17 : ವಿಧಾನಸಭೆಯ ಗುರುವಾರದ ಕಲಾಪದಲ್ಲಿಯೂ ಬೆಂಗಳೂರಿನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿದೆ. ಬಿಜೆಪಿ ಸದಸ್ಯರ ಪ್ರಶ್ನೆಗೆ ಉತ್ತರಿಸುವಾಗ ತಾಳ್ಮೆ ಕಳೆದುಕೊಂಡ ಗೃಹ ಸಚಿವ ಕೆ.ಜೆ.ಜಾರ್ಜ್ ಫೈಲನ್ನು ಮೇಜಿಗೆ ಕುಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು, ಅತ್ಯಾಚಾರ ಪ್ರಕರಣ ಹಾಗೂ ಕರ್ತವ್ಯ ನಿರ್ಲಕ್ಷಿಸಿದ ಇನ್ಸ್ ಪೆಕ್ಟರ್ ವಿರುದ್ಧ ಕ್ರಮದ ಬಗ್ಗೆ ಇಂದು ಉತ್ತರ ನೀಡುವುದಾಗಿ ಸರ್ಕಾರ ಹೇಳಿತ್ತು. ತಕ್ಷಣ ಗೃಹ ಸಚಿವರು ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

assembly session

ಬಿಜೆಪಿ ಸದಸ್ಯರ ಮಾತಿಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಕೆ.ಜೆ.ಜಾರ್ಜ್ ಅರ್ಧಗಂಟೆ ಬಳಿಕ ಉತ್ತರ ನೀಡುವುದಾಗಿ ತಿಳಿಸಿದರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು, ಸರ್ಕಾರ ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದೆ. ಸರ್ಕಾರ ಹೆಣ್ಣುಮಕ್ಕಳ ರಕ್ಷಣೆ ಬಗ್ಗೆ ನಿರ್ಲಕ್ಷ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.

ಇದರಿಂದಾಗಿ ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕ ನಡುವೆ ಮಾತಿನ ಚಕಮಕಿ ಆರಂಭವಾಯಿತು. ಒಂದು ಹಂತದಲ್ಲಿ ತಾಳ್ಮೆ ಕಳೆದುಕೊಂಡ ಕೆ.ಜೆ.ಜಾರ್ಜ್, "ನಿಮ್ಮ ಸರ್ಕಾರದ ಅವಧಿಯಲ್ಲಿ ಇಂತಹ ಘಟನೆ ನಡೆದಿಲ್ಲವೇ? ಅನಾಚಾರ ನಡೆದಿಲ್ಲವೇ? ಮಾಧ್ಯಮದ ಮುಂದೆ ಬರಲು ಈ ರೀತಿ ಮಾಡುತ್ತೀರಿ" ಎಂದು ಆರೋಪಿಸಿದರು. [ಅತ್ಯಾಚಾರ ಪ್ರಕರಣ : ಯಾರು, ಏನು ಹೇಳಿದರು?]

ಗೃಹ ಸಚಿವರ ಹೇಳಿಕೆ ಬಗ್ಗೆ ಆಕ್ರೋಶಗೊಂಡ ಬಿಜೆಪಿ ಸದಸ್ಯರು ರಾಜ್ಯದ ಗೃಹ ಸಚಿವರು ಈ ರೀತಿ ಉತ್ತರ ನೀಡಲು ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು. ಇದರಿಂದ ಕೋಪಗೊಂಡ ಸಚಿವರು ಕೈಯಲ್ಲಿದ್ದ ಫೈಲ್ ಗಳನ್ನು ಮೇಜಿಗೆ ಕುಟ್ಟುವ ಮೂಲಕ ತಮ್ಮ ಅಸಹನೆ ವ್ಯಕ್ತಪಡಿಸಿದರು. ಗೃಹ ಸಚಿವರ ವರ್ತನೆ ಖಂಡಿಸಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು.

English summary
27 days Karnataka Assembly Monsoon session Day 19 highlights. What happened in the Assembly today?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X