ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಮವಾರದ ವಿಧಾನಸಭೆ ಕಲಾಪದ ಮುಖ್ಯಾಂಶಗಳು

|
Google Oneindia Kannada News

ಬೆಂಗಳೂರು, ಜು.7 : ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಆಹಾರ ಧಾನ್ಯಗಳನ್ನು ಪಡೆಯಬೇಕಾದರೆ, ಒಂದು ತಿಂಗಳವೊಳಗೆ ಫಲಾನುಭವಿಗಳು ಪಡಿತರ ಚೀಟಿಗೆ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಸೇರಿಸಬೇಕು. ಇಲ್ಲದಿದ್ದರೆ, ಪಡಿತರ ವಿತರಣೆ ಸ್ಥಗಿತಗೊಳಿಸಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ.

ವಿಧಾನಸಭೆ ಕಲಾಪದ 11ನೇ ದಿನವಾದ ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ವೀರಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್, ಬಿಪಿಎಲ್ ಪಡಿತರಚೀಟಿಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಗುರುತಿನ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚನೆ ನೀಡಲಾಗಿದೆ. ಮುಂದಿನ ತಿಂಗಳಿನೊಳಗೆ ಲಿಂಕ್ ಮಾಡದಿದ್ದರೆ, ಪಡಿತರ ವಿತರಣೆ ಸ್ಥಗಿತಗೊಳಿಸಲಾಗುತ್ತದೆ ಎಂದರು.

Assembly Monsoon session

ಅಕ್ರಮ ಪಂಪ್‌ಸೆಟ್ ಸಕ್ರಮ : ರೈತರ ಅಕ್ರಮ ನೀರಾವರಿ ಪಂಪ್ ಸೆಟ್ ಗಳನ್ನು ಸಕ್ರಮ ಮಾಡಿಕೊಡುವ ಸಂಬಂಧ ಶೀಘ್ರವೇ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಈ ಅಕ್ರಮ ಸಕ್ರಮ ಯಾವ ರೀತಿಯಾಗಿರುತ್ತದೆ, ಯಾವ ಪಂಪ್ ಸೆಟ್ ಗಳಿಗೆ ಅನ್ವಯವಾಗುತ್ತದೆ ಎಂಬ ಬಗ್ಗೆ ಸುತ್ತೋಲೆಯಲ್ಲಿ ವಿವರ ನೀಡುತ್ತೇವೆ ಎಂದು ಅವರು ಹೇಳಿದರು. [ಕಲಾಪದಲ್ಲಿ ಕಾಶಪ್ಪನವರ್ ಪ್ರಕರಣ ಪ್ರತಿಧ್ವನಿ]

ಶೀಘ್ರ ವೇತನ ಬಿಡುಗಡೆ : ಮೇಲ್ದರ್ಜೆಗೇರಿಸಿರುವ ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಶೀಘ್ರ ವೇತನ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಮುಧೋಳ ಕ್ಷೇತ್ರದ ಬಿಜೆಪಿ ಶಾಸಕ ಗೋವಿಂದ ಕಾರಜೋಳ ಪ್ರಶ್ನೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ಜಿಲ್ಲಾಸ್ಪತ್ರೆಗಳನ್ನು ನೂರು ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮಾಡಿದ ನಂತರ ಅಲ್ಲಿನ ಸಿಬ್ಬಂದಿಗೆ ವೇತನ ದೊರಕಿಲ್ಲ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದೆ. ಆದಷ್ಟು ಬೇಗ ವೇತನ ಬಿಡುಗಡೆ ಮಾಡಲಾಗುವುದು ಎಂದರು.

ಆರೋಗ್ಯ ಇಲಾಖೆಗೆ ನೇಮಕಾತಿ : ಎರಡು ವರ್ಷಗಳಲ್ಲಿ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ. ಸೆಪ್ಟೆಂಬರ್ ತಿಂಗಳಿನಲ್ಲಿ ಇಲಾಖೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಿದೆ.

ಮೈಸೂರಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ : ಮೈಸೂರಿನಲ್ಲಿ 150 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದ್ದು, 2018ಕ್ಕೆ ಇದು ಜನರ ಸೇವೆಗೆ ಲಭ್ಯವಾಗುವ ನಿರೀಕ್ಷೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ವಿಧಾನಪರಿಷತ್ತಿನಲ್ಲಿ ಜೆಡಿಎಸ್ ನ ಸಂದೇಶ್ ನಾಗರಾಜ್ ಪ್ರಶ್ನೆಗೆ ಉತ್ತರ ನೀಡಿದ ಅವರು, 2015-16ನೇ ಸಾಲಿನಲ್ಲಿ ಈ ಆಸ್ಪತ್ರೆ ನಿರ್ಮಾಣ ಕಾಮಗಾರಿ ಆರಂಭಿಸಲಾಗುತ್ತದೆ. ನಂತರ ಬೆಳಗಾವಿ, ಹುಬ್ಬಳ್ಳಿ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿಯೂ ಇದೇ ಮಾದರಿಯಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದರು.

English summary
27 days Karnataka Assembly Monsoon session Day Eleven highlights. What happened in the Assembly today?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X