ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

|
Google Oneindia Kannada News

ಬೆಂಗಳೂರು, ಜು. 11 : ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಶುಕ್ರವಾರದ ವಿಧಾನಸಭೆ ಕಲಾಪದಲ್ಲಿ ಸಮತಿ ತನ್ನ ವರದಿಯನ್ನು ಮಂಡನೆ ಮಾಡಿದೆ.

ಶುಕ್ರವಾರ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಮಹಿಳಾ ಮಕ್ಕಳ ಕಲ್ಯಾಣ ಸಮಿತಿ ವರದಿ ಮಂಡಿಸಿದ ಸಮಿತಿ ಅಧ್ಯಕ್ಷೆ ಮತ್ತು ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕಿ ಶಕುಂತಲಾ ಶೆಟ್ಟಿ ಅವರು ತಮ್ಮ ವರದಿಯನ್ನು ಸದನಲ್ಲಿ ಮಂಡಿಸಿದ್ದು, ಸರ್ಕಾರ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಶಿಫಾರಸು ಮಾಡಿದ್ದಾರೆ.

Shakuntala Shetty

ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಮೊಬೈಲ್ ಬಳಸುತ್ತಿರುವುದು ಅಪಹರಣ, ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚಲು ಕಾರಣವಾಗಿದೆ ಎಂದು ವರದಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮೊಬೈಲ್ ಬಳಕೆಗೆ ಅವಕಾಶ ನೀಡಬಾರದು ಎಂದು ಹೇಳಿದ್ದಾರೆ. [ಗುರುವಾರ ಸದನಲ್ಲಿ ಏನಾಯ್ತು?]

ವರದಿಯಲ್ಲಿ ಮಹಿಳಾ ಮೀಸಲಾತಿ ಏರಿಕೆ ಬಗ್ಗೆಯೂ ಶಿಫಾರಸು ಮಾಡಿರುವ ಶಕುಂತಲಾ ಶೆಟ್ಟಿ ಅವರು, ಮಹಿಳಾ ಮೀಸಲಾತಿಯನ್ನು ಶೇ.30ರಿಂದ 32ಕ್ಕೆ ಏರಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಮಹಿಳೆಯರಿಗೆ ರಕ್ಷಣೆ, ಗಾರ್ಮೆಂಟ್ಸ್ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಬೇಕೆಂದು ವರದಿಯಲ್ಲಿ ಒತ್ತಾಯಿಸಲಾಗಿದೆ.

ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಆಳವಡಿಸಬೇಕು, ಗೃಹ ಇಲಾಖೆಯಲ್ಲಿ ಶೇ.20ರಷ್ಟು ಮಹಿಳಾ ಪೊಲೀಸರ ನೇಮಕಾತಿ ಮಾಡಿಕೊಳ್ಳುವುದು ಸೇರಿದಂತೆ ಹಲವಾರು ಶಿಫಾರಸುಗಳನ್ನು ವರದಿಯಲ್ಲಿ ಮಾಡಲಾಗಿದೆ.

ಉದ್ಯೋಗ ಖಾತ್ರಿ ಅಕ್ರಮದ ಬಗ್ಗೆ ಲೋಕಾಯುಕ್ತ ತನಿಖೆ : ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಲೋಕಾಯುಕ್ತ ತನಿಖೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ಸದಸ್ಯ ವೀರಣ್ಣ ಮತ್ತೀಕಟ್ಟಿ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮವಾಗಿರುವ ಕುರಿತು 802 ಪ್ರಕರಣಗಳು ದಾಖಲಾಗಿವೆ. ಸರ್ಕಾರ ಸದ್ಯ ಇವುಗಳನ್ನು ಲೋಕಾಯುಕ್ತ ತನಿಖೆಗೆ ವಹಿಸಲು ನಿರ್ಧಾರ ಕೈಗೊಂಡಿದೆ ಎಂದು ಹೇಳಿದರು.

English summary
27 days Karnataka Assembly Monsoon session Day 15 highlights. What happened in the Assembly today?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X