ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುರುವಾರದ ವಿಧಾನಸಭೆ ಕಲಾಪದ ಮುಖ್ಯಾಂಶಗಳು

|
Google Oneindia Kannada News

ಬೆಂಗಳೂರು, ಜೂ. 26 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಬೋಧಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ. ಆದರೆ, ಅವರ ವೇತನ ಹೆಚ್ಚಳ ಮಾಡುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ.

ಬಿಜೆಪಿಯ ರಾಮಚಂದ್ರೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಬಿಎಂಪಿಯಲ್ಲಿ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರು, ಕಂಪ್ಯೂಟರ್ ಶಿಕ್ಷಕರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಅವರನ್ನು ಖಾಯಂ ಮಾಡಲು ಸಾಧ್ಯವಿಲ್ಲ. ಸದಸ್ಯರ ಕಳಕಳಿಯ ಹಿನ್ನೆಲೆಯಲ್ಲಿ ಅವರ ವೇತನ ಪರಿಷ್ಕರಿಸುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.

Siddaramaiah

ಶೆಟ್ಟರ್-ಕೃಷಿ ಸಚಿವರ ಜಟಾಪಟಿ : ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ಕೃಷಿ ಸಚಿವ ಕೃಷ್ಣ ಭೈರೇಗೌಡ ನಡುವೆ ವಿಧಾನಸಭೆಯಲ್ಲಿ ಗುರುವಾರ ಜಟಾಪಟಿ ನಡೆಯಿತು. ಕೃಷಿ ಸಚಿವ ಕೃಷ್ಣಭೈರೇಗೌಡ, ರೇಷ್ಮೆ ಇಲಾಖೆಯಲ್ಲಿ 580 ಅಧಿಕಾರಿಗಳಿಗೆ ಬಡ್ತಿ ನೀಡಲಾಗಿದೆ. ಅದರಲ್ಲಿ ಕೆಲವರು ಪಾನೀಯ ನಿಗಮ ಹಾಗೂ ನಗರಾಭಿವೃದ್ಧಿ ಇಲಾಖೆಗಳಿಗೆ ಹೋಗಿದ್ದಾರೆ. 300 ಮಂದಿ ಅಧಿಕಾರಿಗಳು ಎಲ್ಲಿಗೂ ಹೋಗಿಲ್ಲ. ಆದ್ದರಿಂದ ಅವರ ಬಡ್ತಿಯನ್ನು ರದ್ದುಪಡಿಸಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.[ಬುಧವಾರದ ಕಲಾಪದ ಮುಖ್ಯಾಂಶಗಳು]

ಸಚಿವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಬಡ್ತಿ ನೀಡಿದರೂ ಯಾವ ಅಧಿಕಾರಿಗಳು ಹೋಗಿಲ್ಲ. ಸುಮ್ಮನೆ ಅವರನ್ನು ವಾಪಸ್ ಕರೆಸಿ ಹರಿಕಥೆ ಹೇಳಬೇಡಿ ಎಂದಾಗ ಕೃಷ್ಣ ಭೈರೇಗೌಡ ಮತ್ತು ಶೆಟ್ಟರ್ ನಡುವೆ ಮಾತಿನ ಚಕಮಕಿ ನಡೆಯಿತು. ಈ ಚರ್ಚೆಗೆ ನಾಗಮಂಗಲ ಶಾಸಕ ಚಲುವರಾಯಸ್ವಾಮಿ ಸಹ ಧ್ವನಿಗೂಡಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಿ. ರೈತರು ಅರಣ್ಯ ಬೆಳೆಸುತ್ತಾರೆ, ರಕ್ಷಣೆ ಮಾಡುತ್ತಾರೆ ಎಂದರು. [ಜಲಮಂಡಳಿ ಭ್ರಷ್ಟಾಚಾರ ಜಾಲಾಡಿದ ಸಿಎಂ ಸಿದ್ದರಾಮಯ್ಯ]

ಪೊಲೀಸ್ ಇಲಾಖೆಯಲ್ಲಿ ಶೇ 20ರಷ್ಟು ಮೀಸಲಾತಿ : ಪೊಲೀಸ್ ಇಲಾಖೆಯ ನೇಮಕಾತಿಗಳಲ್ಲಿ ಮಹಿಳೆಯರಿಗೆ ಇದ್ದ ಮೀಸಲಾತಿಯನ್ನು ಶೇ 10 ರಿಂದ 20ಕ್ಕೆ ಏರಿಸಲಾಗಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ವಿಧಾನಪರಿಷತ್ತಿನಗೆ ಗುರುವಾರ ಮಾಹಿತಿ ನೀಡಿದ್ದಾರೆ. ಅಲ್ಲಮ ಪ್ರಭು ಪಾಟೀಲ್ ಪ್ರಶ್ನೆಗೆ ಉತ್ತರ ನೀಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಮಹಿಯೆಯರಿಗೆ ಸೂಕ್ತ ಅವಕಾಶ ನೀಡಲಾಗುತ್ತಿದೆ ಎಂದು ಹೇಳಿದರು.

ಮಹಿಳೆಯರ ಸುರಕ್ಷತೆ ಹಿನ್ನಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ ಮಹಿಳಾ ಪೊಲೀಸ್ ಠಾಣೆಗಳನ್ನು ಸರ್ಕಾರ ಸ್ಥಾಪನೆ ಮಾಡುತ್ತಿದೆ. 10 ಠಾಣೆಗಳನ್ನು ಸ್ಥಾಪಿಸಲಾಗಿದ್ದು, ಈ ವರ್ಷ ಇನ್ನು 10 ಠಾಣೆಗಳನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿದರು. ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳನ್ನು ನಿಯಂತ್ರಿಸಲು ಗೃಹ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯೂನಿಸೆಫ್ ಸಹಯೋಗದೊಂದಿಗೆ ಗ್ರಾಮ ಸಭೆಗಳನ್ನು ನಡೆಸುವ ಮೂಲಕ ಜಾಗೃತಿ ಮೂಡಿಸಲಾಗುತ್ತದೆ ಎಂದು ಸಚಿವರು ವಿವರ ನೀಡಿದರು.

ಜೈಲುಗಳಲ್ಲಿ ಜಾಮರ್ ಅಳವಡಿಕೆ : ರಾಜ್ಯದ ಕಾರಾಗೃಹಗಳಲ್ಲಿ ನಡೆಯುತ್ತಿರುವ ಅಪರಾಧ ಚಟುವಟಿಕೆಗಳನ್ನು ತಡೆಯಲು ಜೈಲುಗಳಲ್ಲಿ ಜಾಮರ್ ಮತ್ತು ಸ್ಕ್ಯಾನರ್ ಅಳವಡಿಸಲಾಗುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ವಿಧಾನಪರಿಷತ್ತಿನಲ್ಲಿ ಗುರುವಾರ ಹೇಳಿದ್ದಾರೆ. ಮೈಸೂರು ಮತ್ತು ಬೆಂಗಳೂರು ಕಾರಾಗೃಹಗಳಿಗೆ ಈಗಾಗಲೇ ಜಾಮರ್ ಅಳವಡಿಸಲಾಗಿದೆ. ಜೈಲಿನಿಂದ ಬೆದರಿಕೆ ಕರೆ ಹೋಗಿರುವ ಬಗ್ಗೆ ರಾಜ್ಯದ ಎರಡು ಕಡೆ ದೂರು ದಾಖಲಾಗಿದೆ. ಬಳ್ಳಾರಿ, ಧಾರವಾಡ, ಬೆಳಗಾವಿ ಕೇಂದ್ರ ಕಾರಾಗೃಹಗಳಲ್ಲಿ ಶೀಘ್ರದಲ್ಲೇ ಜಾಮರ್ ಅಳವಡಿಸಲಾಗುತ್ತದೆ ಎಂದರು.

English summary
27 days Karnataka Assembly Monsoon session Day Four highlights. What happened in the Assembly today?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X