ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಐಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ರವೀಂದ್ರನಾಥ್

|
Google Oneindia Kannada News

ಬೆಂಗಳೂರು, ಜೂನ್, 2 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

11.30 : ಕಾಫಿ ಶಾಪ್ ನಲ್ಲಿ ಯುವತಿ ಫೋಟೋ ತೆಗೆದ ಪ್ರಕರಣ ಸಿಐಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ಎಡಿಜಿಪಿ ರವೀಂದ್ರನಾಥ್.

ravindranath

11 ಗಂಟೆ : ರಾಜ್ಯ ಸರ್ಕಾರದ ವೈಫಲ್ಯತೆ ಖಂಡಿಸಿ ಬೆಂಗಳೂರಿನ ಟೌನ್ ಹಾಲ್ ಮುಂಭಾಗದಲ್ಲಿ ಬಿಜೆಪಿ ನಾಯಕರ ಧರಣಿ, ಆರ್. ಅಶೋಕ್ ಸೇರಿದಂತೆ ಹಲವು ನಾಯಕರು ಭಾಗಿ.

10 ಗಂಟೆ : ಗುಲ್ಬರ್ಗದಲ್ಲಿ ಬಸ್ ಮತ್ತು ಮ್ಯಾಕ್ಸಿ ಕ್ಯಾಬ್ ಮುಖಾಮುಖಿ ಡಿಕ್ಕಿ 13 ಸಾವು, 14 ಜನರಿಗೆ ಗಾಯ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ. ಮೃತರು ಮಹಾರಾಷ್ಟ್ರ ಮೂಲದವರು.

9.15 : ಬಿಜಾಪುರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಸೋಮವಾರ ಬೆಳಗ್ಗೆ 10 ಗಂಟೆಯಿಂದ ಬಿಜಾಪುರ ಬಂದ್ ಗೆ ಕರೆ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಅಗತ್ಯ ಬಂದೋಬಸ್ತ್ ಕೈಗೊಂಡಿದ್ದಾರೆ. [ಏನಿದು ಬಿಜಾಪುರ ಗಲಭೆ]

9 ಗಂಟೆ : ಬೆಂಗಳೂರು ಪದವೀಧರ ಕ್ಷೇತ್ರದಿಂದ ನಡೆಯುವ ವಿಧಾನಪರಿಷತ್ ಚುನಾವಣೆಗೆ ಡಾ. ಗುರುರಾಜ ಕರ್ಜಗಿ ಅವರು ಸೋಮವಾರ ನಾಮತ್ರ ಸಲ್ಲಿಸಲಿದ್ದಾರೆ. ಶಾಂತಿನಗರದ ಪ್ರಾದೇಶಿಕ ಉಪ ವಿಭಾಗ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಅವರು ನಾಪತ್ರ ಸಲ್ಲಿಸಲಿದ್ದಾರೆ.

ಸಮಯ 8.30 : ವಿಧಾನಪರಿಷತ್ ಮತ್ತು ರಾಜ್ಯಸಭೆ ಚುನಾವಣೆಯ ಅಧಿಸೂಚನೆ ಹೊರಬಿದ್ದಿದ್ದು ಸೋಮವಾರದಿಂದ ನಾಮಪತ್ರ ಸಲ್ಲಿಸಬಹುದಾಗಿದೆ. ಜೂನ್ 19ರಂದು ವಿಧಾನಸಭೆಯಿಂದ ಪರಿಷತ್ತಿನ 7 ಸ್ಥಾನಗಳು ಮತ್ತು ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಂದು ಸಂಜೆ ಫಲಿತಾಂಶ ಪ್ರಕಟಗೊಳ್ಳಲಿದೆ. [ತೆರವಾಗುವ ಸ್ಥಾನಗಳು ಯಾವುವು?]

English summary
Karnataka top news in brief for the day : Karnataka top news in brief for the day : At least 13 people were killed and around 14 others injured in road accident in Gulbarga on June Monday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X