ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಎನ್ಎಫ್ ಪೇದೆ ನವೀನ್ ಗೆ ಜಾಮೀನು

|
Google Oneindia Kannada News

ಬೆಂಗಳೂರು, ಮೇ.29 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

2 ಗಂಟೆ : ಶೃಂಗೇರಿಯ ತನಿಕೋಡು ಚೆಕ್ ಪೋಸ್ಟ್ ಬಳಿ ನಡೆದ ಎಎನ್ಎಫ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎನ್ಎಫ್ ಪೇದೆ ನವೀನ್ ನಾಯಕ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಏ.19ರಂದು ನಡೆದ ಎನ್ ಕೌಂಟರ್ ನಲ್ಲಿ ಕಬೀರ್ ಎಂಬ ಯುವಕ ಮೃತಪಟ್ಟಿದ್ದ. ಈ ಎನ್ ಕೌಂಟರ್ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು, ಪೇದೆ ನವೀನ್ ನಾಯಕ್ ಅವರನ್ನು ಬಂಧಿಸಲಾಗಿತ್ತು.

kabeeer

12.30 : ಧಾರವಾಡ ಜಿಲ್ಲೆಯ ನವಲಗುಂದದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಂಕರಪ್ಪ ಕುರಿ (35) ಎಂಬ ಪೊಲೀಸ್ ಪೇದೆ ಸಾವನ್ನಪ್ಪಿದ್ದಾರೆ. ಟಾಟಾ ಏಸ್ ಶಂಕರಪ್ಪ ಕುರಿ ಚಲಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಶಂಕರಪ್ಪ ಹುಬ್ಬಳ್ಳಿ-ಧಾರವಾಡ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

11.30 : ಎಡಿಜಿಪಿ ರವೀಂದ್ರನಾಥ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿ, ಸಮಸ್ಯೆಯನ್ನು ಬಗೆಹರಿಸಿ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ. ಪೊಲೀಸರ ಪ್ರತಿಭಟನೆಯಿಂದ ಜನರಿಗೆ ಸಮಸ್ಯೆಯಾಗಬಾರದು ಎಂದು ಕಳಕಳಿ ವ್ಯಕ್ತಪಡಿಸಿದ್ದಾರೆ.

9.30 : ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತರು ಗುರುವಾರ ಬೆಳ್ಳಬೆಳಗ್ಗೆ ಶಾಕ್ ನೀಡಿದ್ದಾರೆ. ಬೆಂಗಳೂರಿನ 8 ಕಡೆ ಇಂದು ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಮುಂದುವರೆದಿದೆ.

9.15 : ಜೂನ್ 20ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗಾಗಿ ವಾಯುವ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಎ.ಎಚ್.ಶಿವಯೋಗಿ ಸ್ವಾಮಿ ಗುರುವಾರ ನಾಪತ್ರ ಸಲ್ಲಿಸಲಿದ್ದಾರೆ. 12.30ಕ್ಕೆ ಶಾಂತಿನಗರ ವಿಭಾಗೀಯ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ.

9.ಗಂಟೆ : ಕರ್ನಾಟಕ ಕಾಂಗ್ರೆಸ್ ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಇಂದು ಆತ್ಮಾವಲೋಕನ ಸಭೆ ನಡೆಸಲಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರು ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರು ಹಾಜರಾಗುವ ಸಾಧ್ಯತೆ ಇದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

8.30 : ನಟ ಮತ್ತು ವಸತಿ ಸಚಿವ ಅಂಬರೀಶ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಜೆ.ಪಿನಗರದ ತಮ್ಮ ನಿವಾಸದಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಅಭಿಮಾನಿಗಳ ಸಮ್ಮುಖದಲ್ಲಿ 62 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

English summary
Karnataka top news in brief for the day : Karnataka High Court granted bail to Anti-Naxal Force staff Naveen Naik, Naveen Naik arrested based on a complaint filed by Umar Farooq, the brother of Kabir who was allegedly shot dead at Tanikodu check-post near Sringeri on April 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X