ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಮೇಶ್ವರ್ ಡಿಸಿಎಂ ಮಾಡಿ : ಡಿಗ್ಗಿ ಕಾರಿಗೆ ಮುತ್ತಿಗೆ

|
Google Oneindia Kannada News

ಬೆಂಗಳೂರು, ಮೇ.30 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

2.ಗಂಟೆ : ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಡಿಸಿಎಂ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಕುಮಾರಕೃಪಾ ಅತಿಥಿ ಗೃಹದಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ಜಿಜಯಸಿಂಗ್ ಅವರ ಕಾರಿಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಕಾರ್ಯಕರ್ತರನ್ನು ಸಮಾಧಾನಪಡಿಸಿದ ಸಿಂಗ್ ವಿಧಾನಸೌದದಲ್ಲಿ ಆಯೋಜಿಸಲಾಗಿದ್ದ ಸಭೆಗೆ ತೆರಳಿದರು.

Digvijay Singh

12 ಗಂಟೆ : ಸಾಮಾಜಿಕ ಜಾಲ ತಾಣಗಳಿಗೆ ಬರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶೀಘ್ರವೇ ಫೇಸ್ ಬುಕ್ ಮತ್ತು ಟ್ವಿಟರ್ ಜಾಲ ತಾಣಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡುತ್ತಿದ್ದರು.

11 ಗಂಟೆ : ಎಡಿಜಿಪಿ ಡಾ.ಪಿ.ರವೀಂದ್ರನಾಥ್ ಪ್ರಕರಣ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಗೃಹ ಸಚಿವ ಕೆ.ಜೆ.ಜಾರ್ಜ್ ಪತ್ರಿಕಾಗೋಷ್ಠಿ.

9.ಗಂಟೆ : ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ಸ್ವೀಕರಿಸಿದ ಬಳಿಕ ರಾಜ್ಯದ ಮೂವರು ಸಚಿವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಅನಂತ ಕುಮಾರ್, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿ ಸದಾನಂದ ಗೌಡ ಮತ್ತು ದಾವಣಗೆರೆಯ ಸಂಸದ ಜಿಎಂ ಸಿದ್ದೇಶ್ವರ್ ಅವರುಗಳು ಇಂದು ಬೆಳಗ್ಗೆ ಬೆಂಗಳೂರಿಗೆ ಬಂದಿದ್ದಾರೆ. [ತವರಿಗೆ ಮರಳಿದ್ದಾರೆ ಸಚಿವರು]

English summary
Karnataka top news in brief for the day : Power struggle within the Karnataka Congress party came to the fore again when a section of the workers urged the party state in-charge Digvijay Singh to elevate KPCC president G Parameshwar to the post of the deputy chief minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X