ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಒಟ್ಟು ಶೇ 67.28ರಷ್ಟು ಮತದಾನ

|
Google Oneindia Kannada News

ಬೆಂಗಳೂರು, ಏ. 19 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಒಟ್ಟಾರೆ ಶೇ.67.28ರಷ್ಟು ಮತದಾನವಾಗಿದೆ. ಕರ್ನಾಟಕದ ಇತಿಹಾಸದಲ್ಲಿ ಇದು ಎರಡನೇ ಅತಿ ಹೆಚ್ಚಿನ ಮತದಾನ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅನಿಲ್ ಕುಮಾರ್ ಝಾ, ರಾಜ್ಯದಲ್ಲಿ 1989ರಲ್ಲಿ ಶೇ.67.53ರಷ್ಟು ಮತದಾನವಾಗಿತ್ತು. ಈ ಬಾರಿ ಶೇ 67.28 ಮತದಾನವಾಗಿದೆ ಎಂದು ಮಾಹಿತಿ ನೀಡಿದರು. ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಶೇ.77.18ರಷ್ಟು ಮತದಾನವಾಗಿದ್ದರೆ, ಬೆಂಗಳೂರು ದಕ್ಷಿಣದಲ್ಲಿ ಶೇ.55.69 ಮತದಾನವಾಗಿದೆ ಎಂದರು. [ಮತದಾನದ ಚಿತ್ರಗಳನ್ನು ನೋಡಿ]

anil kumar jha

ಒಟ್ಟು 28 ಕ್ಷೇತ್ರಗಳಲ್ಲಿ ಈ ಬಾರಿ 3,10,64,739 ಮತದಾರರು ಮತದಾನ ಮಾಡಿದ್ದಾರೆ. ಇವರಲ್ಲಿ 1,61,83,386 ಪುರುಷರು, 1,48,89,205 ಮಹಿಳಾ ಮತದಾರರು, 106 ಇತರೆ ಮತದಾರರಿದ್ದಾರೆ ಎಂದರು. ಅಂಚೆ ಮತದಾನಕ್ಕೆ ಮತ ಎಣಿಕೆಯ ದಿನದವರೆಗೂ ಅವಕಾಶವಿದ್ದು, ಮತದಾನದಲ್ಲಿ ಸ್ವಲ್ಪ ಮಟ್ಟಿನ ಏರಿಕೆಯಾಗಬಹುದು ಎಂದು ತಿಳಿಸಿದರು. [ಎಲ್ಲಿ ಎಷ್ಟು ಮತದಾನ ನೋಡಿ]

ಮೂರು ಹಂತದ ಭದ್ರತೆ : ಚುನಾವಣೆ ಮುಗಿದಿದ್ದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಮತಯಂತ್ರಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಬಿಗಿಭದ್ರತೆಯಲ್ಲಿ ಇಡಲಾಗಿದ್ದು, ಮೇ 16ರಂದು ಮತಗಳ ಎಣಿಕೆ ನಡೆಯಲಿದೆ ಎಂದು ಅನಿಲ್ ಕುಮಾರ್ ಝಾ ಹೇಳಿದರು. ಮತಯಂತ್ರಗಳಿಗೆಉ ಸ್ಟ್ರಾಂಗ್ ರೂಮ್ ಗಳಿಗೆ ಪೊಲೀಸ್‌ ಹಾಗೂ ಅರೆಸೇನಾಪಡೆಯ ಯೋಧರ ಭದ್ರತೆ ಒದಗಿಸಲಾಗಿದ್ದು, ಮೂರು ಹಂತದ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ 54,264 ಮತಗಟ್ಟೆಗಳ ಪೈಕಿ ಕನಿಷ್ಠ ಎರಡು ಮತಗಟ್ಟೆಗಳಲ್ಲಿ ಶೇ.100ರಷ್ಟು ಮತದಾನವಾಗಿದೆ. ಹತ್ತಕ್ಕಿಂತಲೂ ಹೆಚ್ಚು ಮತಗಟ್ಟೆಗಳಲ್ಲಿ 99.50 ರಷ್ಟು ಮತದಾನವಾಗಿದ್ದರೆ, ನೂರಕ್ಕೂ ಅಧಿಕ ಮತಗಟ್ಟೆಗಳಲ್ಲಿ ಶೇ.98 ಕ್ಕಿಂತಲೂ ಹೆಚ್ಚು ಮತದಾನವಾಗಿದೆ ಎಂದು ಅನಿಲ್ ಕುಮಾರ್ ಝಾ ಹೇಳಿದರು.

English summary
Elections 2014 : Karnataka recorded an overall voting percentage of 67.28 per cent, the second highest in the history of parliamentary elections in the State, in the single-phase polling held for all the 28 Lok Sabha constituencies on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X