ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ 52 ವರ್ಷದಲ್ಲೇ ಅತಿ ಕಡಿಮೆ ಮಳೆ

By Ashwath
|
Google Oneindia Kannada News

ಬೆಂಗಳೂರು, ಜು.9: ಐವತ್ತೆರಡು ವರ್ಷಗಳಲ್ಲಿ ಈ ಬಾರಿ ರಾಜ್ಯದಲ್ಲಿ ಅತ್ಯಂತ ಕಡಿಮೆ ಮಳೆಯಾಗಿದೆ ಎಂದು ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್‌ ತಿಳಿಸಿದ್ದಾರೆ.

ಶೂನ್ಯ ವೇಳೆಯಲ್ಲಿ ವಿಧಾನಸಭೆಯಲ್ಲಿ ಬಿಜೆಪಿಯ ಗುರುಪಾದಪ್ಪ ನಾಗಮಾರಪಲ್ಲಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ವಾಡಿಕೆ ಪ್ರಕಾರ ಬೀಳಬೇಕಾದ ಮಳೆಯಲ್ಲಿ ಈ ಬಾರಿ ಕಡಿಮೆ ಮಳೆಯಾಗಿದ್ದು, ಬರ ಪರಿಸ್ಥಿತಿ ತಲೆದೋರಿದೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗದಿದ್ದರೆ ಕಷ್ಟ ಎದುರಾಗಲಿದೆ. ಪರಿಸ್ಥಿತಿಯ ಗಂಭೀರತೆ ಅರಿತು ರಾಜ್ಯ ಸರ್ಕಾರ ಪರ್ಯಾಯ ಸಿದ್ಧತೆಯಲ್ಲಿ ತೊಡಗಿದೆ ಎಂದು ತಿಳಿಸಿದರು.[ಭಾರತದಲ್ಲಿ ಮುಂಗಾರು ಮಳೆ ಶೇ.45 ಕುಸಿತ]

drought india

ರೈತರಿಗೆ ರಿಯಾಯಿತಿ ದರದಲ್ಲಿ ಬೀಜ: ಸರಿಯಾದ ಸಮಯಕ್ಕೆ ಮಳೆಯಾಗದೇ ಬೀಜ ಮೊಳಕೆಯೊಡೆಯದಿದ್ದರೆ ರೈತರಿಗೆ ರಿಯಾಯಿತಿ ದರದಲ್ಲಿ ಮತ್ತೊಮ್ಮೆ ಬಿತ್ತನೆ ಬೀಜವನ್ನು ವಿತರಿಸಲಾಗುವುದೆಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. [ಬೆಂಗಳೂರು: ಮಳೆ ಕೊರತೆ - ತರಕಾರಿ ಬೆಲೆ ಏರಿಕೆ]

ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಸದಸ್ಯರಾದ ಡಾ. ಮತ್ತಿಕಟ್ಟಿ ವೀರಣ್ಣ ಹಾಗೂ ಮೃತ್ಯುಂಜಯ ಜಿನಗಾ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮುಂಗಾರು ಹಿನ್ನೆಡೆಯಿಂದ ಬೆಳೆ ಹಾನಿಯಾದರೆ ಅದಕ್ಕೆ ಪರ್ಯಾಯವಾಗಿ ಅಲ್ಪಾವಧಿ ಮತ್ತು ಮಧ್ಯಮಾವಧಿಗೆ ಬೆಳೆಯಬಹುದಾದ ಬೆಳೆಗಳ ಕುರಿತ ಸರ್ಕಾರ ಈಗಾಗಲೇ ಪುಸ್ತಕವನ್ನು ಸಿದ್ಧಪಡಿಸಿಕೊಂಡಿದೆ ಎಂದು ತಿಳಿಸಿದರು.

ಹವಾಮಾನ ಇಲಾಖೆಯವರು ಏಳೆಂಟು ದಿನಗಳಲ್ಲಿ ಮಳೆಯಾಗಬಹುದೆಂದು ತಿಳಿಸಿದ್ದಾರೆ. ಆದರೂ ಮಳೆಯಾಗದಿದ್ದರೆ, ರೈತರಿಗೆ ಪರ್ಯಾಯವಾಗಿ ಅಲ್ಪಾವಧಿ ಹಾಗೂ ಮಧ್ಯಮಾವಧಿಗೆ ಬೆಳೆಯಬಹುದಾದ ಬೆಳೆಗಳ ಬಿತ್ತನೆ ಬೀಜಗಳನ್ನು ಹಾಗೂ ರಸಗೊಬ್ಬರವನ್ನು ಒದಗಿಸುವ ಸಲುವಾಗಿ ಈಗಾಗಲೇ ದಾಸ್ತಾನು ಮಾಡಲಾಗಿದೆ ಎಂದರು.[ಜೂನ್‌ ಮಳೆ: 113 ವರ್ಷದ ಇತಿಹಾಸದಲ್ಲಿ ಕಡಿಮೆ ಮಳೆ]

ಅಲ್ಪಾವಧಿ ಹಾಗೂ ಮಧ್ಯಮಾವಧಿಯಲ್ಲಿ ಬೆಳೆಯಬಹುದಾದ ಪರ್ಯಾಯ ಬೆಳೆಗಳ ಕುರಿತು ಪುಸಕ್ತವನ್ನು ಸಿದ್ಧಪಡಿಸಿರುವುದಲ್ಲದೆ, ಇಲಾಖೆಯಲ್ಲಿ ಇದಕ್ಕಾಗಿ ಈಗಾಗಲೇ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ರೈತರಿಗೆ ಪರ್ಯಾಯ ಬೆಳೆಗಳ ಬಗ್ಗೆ ಮಾಹಿತಿಯನ್ನು ನೀಡುವ ಸಲುವಾಗಿ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಳ್ಳಲಿದೆ. ಒಟ್ಟಿನಲ್ಲಿ ಮುಂಗಾರು ಮಳೆಯ ಹಿನ್ನೆಡೆಯಿಂದ ರೈತರಿಗಾಗುವ ನಷ್ಟವನ್ನು ತಡೆಯಲು ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸದಸ್ಯರಿಗೆ ಮಾಹಿತಿ ನೀಡಿದರು.

English summary
Karnataka Assembly session 2014: Revenue Minister V Srinivas Prasad said, Karnataka facing its worst rainfall in 52 years this monsoon season. Monsoon rains typically begin in early June every year but were delayed this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X