ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್‌ಸಿ ಹಗರಣ : ಸಿಎಂ ಕುರ್ಚಿ ಕಳೆದುಕೊಳ್ಳಲಿದ್ದಾರೆ

|
Google Oneindia Kannada News

ಬೆಂಗಳೂರು, ಆ.20 : ಕೆಪಿಎಸ್‌ಸಿ ನೇಮಕಾತಿ ರದ್ದುಗೊಳಿಸಿರುವ ಸರ್ಕಾರದ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. 2011ರ ನೇಮಕಾತಿ ಆದೇಶವನ್ನು ರದ್ದುಗೊಳಿಸಿರುವುದು ಷಡ್ಯಂತ್ರವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ನಿರ್ಧಾರ ಹಿಂಪಡೆಯದಿದ್ದರೆ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಂತರ ಮಾತನಾಡಿದ ಕುಮಾರಸ್ವಾಮಿ, ಕೆಪಿಎಸ್‌ಸಿ ಹಗರಣದ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ, ಆತುರವಾಗಿ ಸಿಐಡಿ ವರದಿ ತರಿಸಿಕೊಂಡು ನೇಮಕಾತಿ ರದ್ದುಗೊಳಿಸುವ ಅಗತ್ಯವೇನಿತ್ತು ಎಂದು ಸರ್ಕಾರವನ್ನು ಪ್ರಶ್ನಿಸಿದರು.

KPSC scam

ನೊಂದ ಅಭ್ಯರ್ಥಿಗಳು ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸಿದ್ದು ಕಾನೂನು ಹೋರಾಟ ನಡೆಸಲಿದ್ದಾರೆ. ಕಾನೂನು ಹೋರಾಟದ ಬಗ್ಗೆ ಯೋಜನೆ ತಯಾರಿಸಲಾಗುತ್ತಿದೆ. ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಅಥವ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಕುರಿತು ಅಭ್ಯರ್ಥಿಗಳ ಜೊತೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅಡ್ವೊಕೇಟ್ ಜನರಲ್ ರವಿವರ್ಮ ಕುಮಾರ್ ಅವರು ಈ ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಶಂಕೆ ಇದೆ. ರಾಜ್ಯದ ಜನರು ಎಲ್ಲವನ್ನು ಗಮನಿಸುತ್ತಿದ್ದು ಮುಖ್ಯಮಂತ್ರಿಗಳು ತಮ್ಮ ನಿರ್ಧಾರ ವಾಪಸ್ ಪಡೆಯದಿದ್ದರೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿರು.

ದಲಿತ ಸಂಘರ್ಷ ಸಮಿತಿ, ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣ ಸೇರಿದಂತೆ 20ಕ್ಕೂ ಹೆಚ್ಚು ಸಂಘಟನೆಗಳು ನೊಂದ ಅಭ್ಯರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದ್ದವು. ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಹಾಕಿರುವ ಹಿನ್ನಲೆಯಲ್ಲಿ ಅಭ್ಯರ್ಥಿಗಳು ಫ್ರೀಡಂಪಾರ್ಕ್‌ನಲ್ಲಿಯೇ ಪ್ರತಿಭಟನೆ ನಡೆಸಿದರು.

ಹಿಂದಿನ ಸುದ್ದಿ : ಕೆಪಿಎಸ್‌ಸಿ ನೇಮಕಾತಿ ರದ್ದುಗೊಳಿಸಿರುವ ಸರ್ಕಾರದ ವಿರೋಧಿಸಿ ನೊಂದ ಅಭ್ಯರ್ಥಿಗಳು ಬುಧವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇಂದು ಅಭ್ಯರ್ಥಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲಿದ್ದು, ಕಾನೂನು ಹೋರಾಟ ಆರಂಭಿಸಲಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆಯಲಿರುವ ಈ ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ. ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ನೊಂದ ಅಭ್ಯರ್ಥಿಗಳ ಈ ಪ್ರತಿಭಟನೆಗೆ ಬೆಂಬಲ ನೀಡಿವೆ. [ಕೆಪಿಎಸ್ಸಿ ನೇಮಕಾತಿ ರದ್ದು]

ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಮೊದಲು ಘೋಷಿಸಿದ್ದರು. ಆದ್ದರಿಂದ ಬೆಂಗಳೂರು ಪೊಲೀಸರು ವಿಧಾನಸೌಧದ ಸುತ್ತಮುತ್ತಲಿನ ಒಂದು ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪ್ರತಿಭಟನೆಗೆ ಅವಕಾಶ ನೀಡಿಲ್ಲ. [ಶಕ್ತಿಸೌಧದ ಸುತ್ತ ಕರ್ಫ್ಯೂ ಜಾರಿ]

English summary
Month-long protests by the candidates of 2011 Karnataka Public Service Commission (KPSC) final list, will end on August 20. The candidates are set to approach the judiciary for justice.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X