ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣಾ ಫಲಿತಾಂಶ : ಯಾರು, ಏನು ಹೇಳಿದರು?

|
Google Oneindia Kannada News

ಬೆಂಗಳೂರು, ಮೇ 16 : ಹದಿನಾರನೇ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ವಿಧಾನಸಭೆ ಚುನಾವಣೆಯ ಸೋಲನ್ನು ಮರೆತು ಕರ್ನಾಟಕದಲ್ಲಿ ಕಮಲ ಅರಳಿ ನಿಂತಿದ್ದು, ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ.

ಕೇಂದ್ರ ಸರ್ಕಾರದ ಆಡಳಿತ ವಿರೋಧಿ ಅಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸಹ ಕೊಚ್ಚಿ ಹೋಗಿದೆ. ರಾಜ್ಯದಲ್ಲಿ ನರೇಂದ್ರ ಮೋದಿ ಮಾಡಿದ ಪ್ರಚಾರ ಫಲ ನೀಡಿದ್ದು ಜನರು ನಮೋ ಎಂದಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ವೀರಪ್ಪ ಮೊಯ್ಲಿ ಗೆಲುವು ಸಾಧಿಸಿದ್ದಾರೆ. [ಕರ್ನಾಟಕದಲ್ಲಿ ಸೋತು ಗೆದ್ದವರು]

ರಾಜ್ಯದ ವಿವಿಧ ಪಕ್ಷಗಳ ರಾಜಕೀಯ ನಾಯಕರು ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಂದನ್ ನಿಲೇಕಣಿ ಸೋಲು ಅನುಭವಿಸಿದ್ದು "ನನ್ನ ಸೋಲನ್ನು ಒಪ್ಪಿಕೊಂಡಿದ್ದು, ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ" ಎಂದು ಹೇಳಿದ್ದಾರೆ. ವಿವಿಧ ರಾಜಕೀಯ ನಾಯಕರ ಪ್ರತಿಕ್ರಿಯ ಇಲ್ಲಿದೆ ನೋಡಿ

ನಮ್ಮ ಅಧಿಕಾರ ಇನ್ನು 4 ವರ್ಷಗಳಿವೆ

ನಮ್ಮ ಅಧಿಕಾರ ಇನ್ನು 4 ವರ್ಷಗಳಿವೆ

ನಮಗೆ ಜನರು ನೀವು ಐದು ವರ್ಷ ಆಡಳಿತ ನಡೆಸಿ ಎಂದು ಜನಾದೇಶ ಕೊಟ್ಟಿದ್ದಾರೆ. ನಾವು ಒಂದು ವರ್ಷವನ್ನು ಪೂರ್ಣಗೊಳಿಸಿದ್ದೇವೆ, ಇನ್ನೂ ನಾಲ್ಕು ವರ್ಷ ಆಡಳಿತವಿದೆ ಎಂದು ಸಿಎಂ ಸಿದ್ದರಾಮಯ್ಯ ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಇದು ರಾಷ್ಟ್ರೀಯ ವಿಷಯಗಳ ಆಧಾರದ ಮೇಲೆ ನಡೆದ ಚುನಾವಣೆ. ಆದ್ದರಿಂದ ಜನರು ನಮ್ಮ ಸರ್ಕಾರದ ಸಾಧನೆಯನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಿಲ್ಲ. ಈ ಫಲಿತಾಂಶ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನರೇಂದ್ರ ಮೋದಿಗೆ ಜನರು ಬೆಂಬಲ ನೀಡಿದ್ದಾರೆ

ನರೇಂದ್ರ ಮೋದಿಗೆ ಜನರು ಬೆಂಬಲ ನೀಡಿದ್ದಾರೆ

ನರೇಂದ್ರ ಮೋದಿಗೆ ಬೆಂಬಲ ನೀಡಿದ ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ಸರ್ಕಾರದ ದುಷ್ಟ ಆಡಳಿತವನ್ನು ತೊಲಗಿಸಲು ನರೇಂದ್ರ ಮೋದಿ ಅವರಿಗೆ ಜನರು ಬೆಂಬಲ ನೀಡಿದ್ದಾರೆ ಎಂದು ಹೇಳಿದರು. ಶಿವಮೊಗ್ಗದಲ್ಲಿ ನಾನು 1 ಲಕ್ಷ ಮತಗಳ ಅಂತರದಲ್ಲಿ ಜಯಗಳಿಸುತ್ತೇನೆ ಎಂದು ಹೇಳಿದ್ದೆ, ಈಗಲೂ ಅದೇ ಆಗಿದೆ ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯದ ಜನತೆಯ ಗೆಲುವು

ರಾಜ್ಯದ ಜನತೆಯ ಗೆಲುವು

ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚಿಕ್ಕಬಳ್ಳಾಪುರದಲ್ಲಿ ನನ್ನ ಸೋಲು ರಾಜ್ಯದ ಜನರ ಗೆಲುವಾಗಿದೆ. ಜನರು ನಾನು ರಾಜ್ಯದಲ್ಲೇ ಕೆಲಸ ಮಾಡಬೇಕು ಎಂದು ಬಯಸಿದ್ದಾರೆ ಎಂದು ಹೇಳಿದರು. ನರೇಂದ್ರ ಮೋದಿ ರಾಜ್ಯದಲ್ಲಿ ಪ್ರಚಾರ ನಡೆಸಿ ಮತ ಕೇಳಿದ್ದರು. ಜನರು ಅವರಿಗೆ ಬೆಂಬಲ ನೀಡಿದ್ದಾರೆ. ರಾಜ್ಯದ ಜನತ ತೀರ್ಪನ್ನು ನಾನು ಸ್ವಾಗತಿಸುತ್ತೇನೆ ಎಂದರು.

ಮೋದಿ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿದೆ

ಮೋದಿ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿದೆ

ನರೇಂದ್ರ ಮೋದಿ ಅವರ ಅಲೆಯಲ್ಲಿ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಕೊಚ್ಚಿ ಹೋಗಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಹೇಳಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನನ್ನನ್ನು ಗೆಲ್ಲಿಸಿದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ, ನಾಯಕರ ಯೋಜನೆ, ಲಕ್ಷಾಂತರ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ಸರ್ಕಾರದಲ್ಲಿ ಕೆಲಸ ಮಾಡುವ ಕುರಿತು ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದರು.

ಪಕ್ಷದಲ್ಲೇ ಇದ್ದು ಕೆಲಸ ಮಾಡುತ್ತೇನೆ

ಪಕ್ಷದಲ್ಲೇ ಇದ್ದು ಕೆಲಸ ಮಾಡುತ್ತೇನೆ

"ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನನ್ನ ಸೋಲನ್ನು ನಾನು ಒಪ್ಪಿಕೊಳ್ಳುತ್ತೇನೆ" ಎಂದು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂದನ್ ನಿಲೇಕಣಿ ಹೇಳಿದ್ದಾರೆ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ, ಪಕ್ಷದಲ್ಲಿಯೇ ಇದ್ದುಕೊಂಡು ಬೆಂಗಳೂರಿನ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.

ಜನರ ನೀರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿ

ಜನರ ನೀರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿ

ಲೋಕಸಭೆ ಚುನಾವಣೆಯಲ್ಲಿ ಒಂದು ಪಕ್ಷಕ್ಕೆ ಸ್ಪಷ್ಟ ಬಹುಮತ ದೊರಕಿದ್ದಕ್ಕೆ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಪಕ್ಷದ ಮೇಲೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡು ಜನರು ಮತ ನೀಡಿದ್ದಾರೆ. ಅದನ್ನು ಪಕ್ಷ ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಮೈಸೂರಿನ ಮಗನಾಗಿ ಕೆಲಸ ಮಾಡುತ್ತೇನೆ

ಮೈಸೂರಿನ ಮಗನಾಗಿ ಕೆಲಸ ಮಾಡುತ್ತೇನೆ

ಮೈಸೂರಿನ ಮಗನಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ಮೈಸೂರು-ಕೊಡಗು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಹೇಳಿದ್ದಾರೆ. ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಗೆಲುವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದಗಳನ್ನು ಹೇಳುತ್ತೇನೆ. ಕ್ಷೇತ್ರದ ಅಭಿವೃದ್ಧಿಗೆ ಶ್ರಮವನ್ನು ವಿನಿಯೋಗಿಸುತ್ತೇನೆ. ನನ್ನನ್ನು ಬೆಳೆಸಿದ ಗುರುಗಳಾದ ವಿಶ್ವೇಶ್ವರ ಭಟ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

ಮೋದಿ ಮೋಡಿ ನಡೆದಿದೆ

ಮೋದಿ ಮೋಡಿ ನಡೆದಿದೆ

ದೇಶದಲ್ಲಿ ಮೋದಿ ಮೋಡಿ ನಡೆದಿದೆ ಆದ್ದರಿಂದ ಜನ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರ ತಂತ್ರದಲ್ಲಿ ಬಿಜೆಪಿ ಯಶಸ್ವಿಯಾಗಿದೆ
ಬಡವರ ಸರ್ಕಾರವನ್ನು ಜನರು ಕಡೆಗಣಿಸಿದ್ದಾರೆ. ನಾವು ಸೋಲಿನ ಆತ್ಮಲೋಕನ ಮಾಡಿಕೊಳ್ಳುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.

ನರೇಂದ್ರ ಮೋದಿ ಅವರ ಪ್ರಯತ್ನಕ್ಕೆ ಸಂದ ಫಲ

ನರೇಂದ್ರ ಮೋದಿ ಅವರ ಪ್ರಯತ್ನಕ್ಕೆ ಸಂದ ಫಲ

ಬಿಜೆಪಿಯ ಐತಿಹಾಸಿಕ ಗೆಲುವು ನರೇಂದ್ರ ಮೋದಿ ಅವರ ಪ್ರಯತ್ನ ಮತ್ತು ಕಾರ್ಯಕರ್ತರ ಶ್ರಮಕ್ಕೆ ಸಿಕ್ಕ ಫಲ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ತಮ್ಮ ಗೆಲುವಿಗೆ ಶ್ರಮಿಸಿದ ಎಲ್ಲರಿಗೂ ಜೋಶಿ ಕೃತಜ್ಞತೆ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ ದುರಾಡಳಿತಕ್ಕೆ ತಕ್ಕ ಫಲ ಸಿಕ್ಕಿದೆ

ಸಿದ್ದರಾಮಯ್ಯ ದುರಾಡಳಿತಕ್ಕೆ ತಕ್ಕ ಫಲ ಸಿಕ್ಕಿದೆ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲು ಅನುಭವಿಸಿರುವುದು ಸಿದ್ದರಾಮಯ್ಯ ಅವರ ದುರಾಡಳಿತಕ್ಕೆ ಸಿಕ್ಕ ಫಲ ಎಂದು ಉಡುಪಿ-ಚಿಕ್ಕಗಳೂರು ಕ್ಷೇತ್ರದಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕೇಂದ್ರದಲ್ಲಿ ಮಂತ್ರಿಯಾಗುವ ಆಸೆ ನನಗಿಲ್ಲ, ಸ್ತ್ರೀಯರ ಪರವಾಗಿ ನಾನು ಕೆಲಸ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

English summary
Lok Sabha Election results 2014 : Karnataka political leaders reaction to a historic victory of Bharatiya Janata Party in Lok Sabha Election 2014.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X