ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಗೇಪಲ್ಲಿ ಬಳಿ ಕೆಎಸ್ಆರ್ ಟಿಸಿ ಬಸ್ಸಿಗೆ ಬೆಂಕಿ

|
Google Oneindia Kannada News

ಬೆಂಗಳೂರು, ನ. 23: ಆಂಧ್ರಪ್ರದೇಶ ಮತ್ತು ಹಾವೇರಿ ಬಸ್ ದುರಂತ ಪ್ರಕರಣಗಳು ನೆನಪಿನಿಂದ ಮಾಸುವ ಮುನ್ನವೇ ಬಾಗೇಪಲ್ಲಿಯಲ್ಲಿ ಮತ್ತೊಂದು ಕೆಎಸ್ಆರ್ ಟಿಸಿ ಬಸ್ ಬೆಂಕಿಗೆ ಆಹುತಿಯಾಗಿದೆ. ಶನಿವಾರ 5 ಗಂಟೆ ಸುಮಾರಿಗೆ ಸಂಭವಿಸಿದ ಈ ಅಗ್ನಿ ಆಕಸ್ಮಿಕದಲ್ಲಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 40 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶನಿವಾರ ಪುಟ್ಟಪರ್ತಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ ಟಿಸಿಯ ಐರಾವತ ಬಸ್ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಬಳಿ ಬೆಂಕಿಗೆ ಆಹುತಿಯಾಗಿದೆ. ತಕ್ಷಣ ಚಾಲಕ ಬಸ್ಸಿನಲ್ಲಿದ್ದ ಸುಮಾರು 40 ಪ್ರಯಾಣಿಕರಿಗೆ ಕೆಳಗಿಳಿಯುವಂತೆ ಸೂಚನೆ ನೀಡಿದ್ದಾನೆ. ಚಾಲಕ ರಮೇಶ್ ಸಮಯ ಪ್ರಜ್ಞೆಯಿಂದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. (ಹೈದರಾಬಾದ್ ಬಸ್ ದುರಂತದ ಚಿತ್ರಗಳು)

ಆಂಧ್ರಪ್ರದೇಶ-ಕರ್ನಾಟಕ ಗಡಿಯಲ್ಲಿ ಶನಿವಾರ ಸಂಜೆ 5ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ಅಗ್ನಿ ಶಾಮಕದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಮೊದಲು ಬಸ್ ಇಂಜಿನ್ ನಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಬಸ್ಸಿಗೆ ಹಬ್ಬಿದೆ ಎಂದು ತಿಳಿದು ಬಂದಿದೆ. (ಶನಿವಾರದ ಇತರ ಪ್ರಮುಖ ಸುದ್ದಿಗಳು)

ಮತ್ತೊಂದು ಬಸ್ಸಿಗೆ ಬೆಂಕಿ

ಮತ್ತೊಂದು ಬಸ್ಸಿಗೆ ಬೆಂಕಿ

ಪುಟ್ಟಪರ್ತಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ ಟಿಸಿಯ ಐರಾವತ ಬಸ್ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಬಳಿ ಬೆಂಕಿಗೆ ಆಹುತಿಯಾಗಿದೆ. ತಕ್ಷಣ ಚಾಲಕ ಬಸ್ಸಿನಲ್ಲಿದ್ದ ಸುಮಾರು 40 ಪ್ರಯಾಣಿಕರಿಗೆ ಕೆಳಗಿಳಿಯುವಂತೆ ಸೂಚನೆ ನೀಡಿದ್ದಾನೆ. ಚಾಲಕ ರಮೇಶ್ ಸಮಯ ಪ್ರಜ್ಞೆಯಿಂದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಂಧ್ರಪ್ರದೇಶ-ಕರ್ನಾಟಕ ಗಡಿಯಲ್ಲಿ ಶನಿವಾರ ಸಂಜೆ 4.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಅಗ್ನಿ ಶಾಮಕದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ.

ಪೊಲೀಸರು ಎಚ್ಚರವಾಗಿರಿ

ಪೊಲೀಸರು ಎಚ್ಚರವಾಗಿರಿ

ಮುಂಬರುವ ಲೋಕಸಭೆ ಮತ್ತು ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಮೇಲೆ ಭಯೋತ್ಪದಾಕರ ಕಣ್ಣು ಬಿದ್ದಿದೆ. ಈ ಸಮಯದಲ್ಲಿ ಅವರು ವಿಧ್ವಂಸಕ ಕೃತ್ಯಗಳನ್ನು ನಡೆಸುವ ಸಾಧ್ಯತೆ ಇದೆ. ಆದ್ದರಿಂದ, ಅಗತ್ಯ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ಮನಮೋಹನ್ ಸಿಂಗ್ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪೊಲೀಸರು ಕೋಮು ಗಲಭೆಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿ ತಿಳಿಸಿದ್ದಾರೆ.

ಹಿರೇಮಠ್ ಕಚೇರಿ ಮೇಲೆ ದಾಳಿ

ಹಿರೇಮಠ್ ಕಚೇರಿ ಮೇಲೆ ದಾಳಿ

ಮಾಜಿ ಸಚಿವ ಸಂತೋಷ್ ಲಾಡ್ ರಾಜೀನಾಮೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರ ಧಾರವಾಡದ ಕಛೇರಿಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಅಲ್ಲಿನ ಸಿಬ್ಬಂದಿಗಳಿಗೆ ಬೆದರಿಕೆ ಹಾಕಿದ್ದಾರೆ. ಬೆಳಗ್ಗೆ 9.30ರ ಸುಮಾರಿಗೆ ಕಚೇರಿಗೆ ಆಗಮಿಸಿದ 5-6 ಮಂದಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಹಿರೇಮಠ್ ಕಚೇರಿಯಲ್ಲಿ ಇರಲಿಲ್ಲ. ಇದು ಕಲಘಟಗಿ ಕಾಂಗ್ರೆಸ್ ಕಾರ್ಯಕರ್ತರ ಕೆಲಸವಿರಬಹುದು ಎಂದು ಹಿರೇಮಠ್ ಶಂಕೆ ವ್ಯಕ್ತಪಡಿಸಿದ್ದು, ಸ್ಥಳೀಯ ಪೊಲೀಸ್ ಠಾಣೆ ಮತ್ತು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಯಡಿಯೂರಪ್ಪ ಪರ ಗಡ್ಕರಿ ಬ್ಯಾಟಿಂಗ್

ಯಡಿಯೂರಪ್ಪ ಪರ ಗಡ್ಕರಿ ಬ್ಯಾಟಿಂಗ್

ಮಾಜಿ ಸಿಎಂ ಮತ್ತು ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚಿಕ್ಕ-ಪುಟ್ಟ ಕಾರಣಕ್ಕಾಗಿ ಬಿಜೆಪಿ ತೊರೆದಿದ್ದಾರೆ. ಅವರನ್ನು ಪಕ್ಷಕ್ಕೆ ಮರಳಿ ಕರೆತರಲು ರಾಷ್ಟ್ರೀಯ ನಾಯಕರು ಪ್ರಯತ್ನ ನಡೆಸಲಿದ್ದಾರೆ ಎಂದು ಮಾಜಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಹೇಳಿದ್ದಾರೆ. ಯಡಿಯೂರಪ್ಪ ಪಕ್ಷಕ್ಕೆ ಮರಳುವ ಕುರಿತು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಹೆಗಲಿಗೆ ವಾರ್ತಾ ಇಲಾಖೆ

ಸಿದ್ದರಾಮಯ್ಯ ಹೆಗಲಿಗೆ ವಾರ್ತಾ ಇಲಾಖೆ

ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ವಾರ್ತಾ ಹಾಗೂ ಮೂಲ ಸೌಕರ್ಯ ಖಾತೆಗೆ ಸಂತೋಷ್ ಲಾಡ್‌ ನೀಡಿದ ರಾಜೀನಾಮೆಯನ್ನು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಶನಿವಾರ ಅಂಗೀಕರಿಸಿದ್ದಾರೆ. ಇದರಿಂದ ಲಾಡ್‌ ಅವರಿಂದ ತೆರವಾದ ವಾರ್ತಾ ಇಲಾಖೆಯ ಹೊಣೆ ಸಿಎಂ ಸಿದ್ದರಾಮಯ್ಯ ಅವರ ಹೆಗಲೇರಿದೆ. ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಮೂಲ ಸೌಕರ್ಯ ಖಾತೆಯನ್ನು ಯೋಜನಾ, ಐಟಿ, ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯನ್ನು ನೋಡಿಕೊಳ್ಳುತ್ತಿರುವ ಎಸ್‌.ಆರ್‌.ಪಾಟೀಲ್ ಅವರಿಗೆ ವಹಿಸಲಾಗಿದೆ.

ತರುಣ್ ತೇಜ್ಪಾಲ್ ಬಂಧನ ಸಾಧ್ಯತೆ

ತರುಣ್ ತೇಜ್ಪಾಲ್ ಬಂಧನ ಸಾಧ್ಯತೆ

ಲೈಂಗಿಕ ಕಿರುಕುಳ ಆರೋಪಕ್ಕೆ ಸಿಲುಕಿರುವ ತೆಹೆಲ್ಕಾ ಪತ್ರಿಕೆ ಸಂಪಾದಕ ತರುಣ್ ತೇಜ್ಪಾಲ್ ವಿರುದ್ಧ ಗೋವಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ. ಗೋವಾ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ, ತೇಜ್ಪಾಲ್ ನಿವಾಸಕ್ಕೆ ಆಗಮಿಸಿ ವಿಚಾರಣೆ ನಡೆಸುತ್ತಿದ್ದಾರೆ. ಗೋವಾ ಪೊಲೀಸರ ಮತ್ತೊಂದು ತಂಡ ತೆಹಲ್ಕಾ ಕಚೇರಿಗೂ ತೆರಳಿದ್ದು, ಅಲ್ಲಿನ ಕೆಲವು ಸಿಬ್ಬಂದಿಗಳನ್ನು ವಿಚಾರಣೆ ನಡೆಸುತ್ತಿದೆ.

English summary
A Karnataka State Road Transport Corporation Airavat class bus, on its way to Puttaparthi from Bangalore, caught fire in near Bagepalli Chikkaballapur district on November 23. Saturday. All passengers out of danger.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X