ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ ಸಿಎಂ

|
Google Oneindia Kannada News

ಬೆಂಗಳೂರು, ಸೆ.5 : ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಿಂದ ಬಂದವರು ಸಿಹಿ ಸುದ್ದಿ ಕೊಡುತ್ತಾರೆ ಎಂದು ಕಾದು ಕುಳಿತಿದ್ದ ಸಚಿವ ಸ್ಥಾನದ ಆಕ್ಷಾಂಕ್ಷಿಗಳಿಗೆ ನಿರಾಸೆಯಾಗಿದೆ. ಸದ್ಯ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ, ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಟಿಸುವ ವಿಚಾರದಲ್ಲಿಯೂ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಎರಡು ದಿನಗಳಿಂದ ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್‌ನ ಹಲವಾರು ನಾಯಕರನ್ನು ಭೇಟಿ ಮಾಡಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ವರಿಷ್ಠರೊಂದಿಗೆ ತಾವು ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

Siddaramaiah

ಎರಡು ದಿನಗಳ ಪ್ರವಾಸದಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಆದರೆ, ಯಾವುದೇ ಭೇಟಿಗಳಲ್ಲೂ ಸಂಪುಟ ವಿಸ್ತರಣೆಯ ಪ್ರಸ್ತಾಪ ಮಾಡಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದರು. [ದಸರಾ ನಂತರ ಸಚಿವ ಸಂಪುಟ ವಿಸ್ತರಣೆ]

ಇಂತಹ ವಿಚಾರವನ್ನು ಮೊದಲು ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳೊಂದಿಗೆ ಚರ್ಚೆ ನಡೆಸಬೇಕಾಗುತ್ತದೆ. ಆದರೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ದಿಗ್ವಿಜಯ ಸಿಂಗ್ ವಿದೇಶಕ್ಕೆ ತೆರಳಿದ್ದಾರೆ. ಆದ್ದರಿಂದ ಸಂಪುಟ ವಿಸ್ತರಣೆ ಮತ್ತು ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಿಎಂ ತಿಳಿಸಿದರು. [ಡಿಸಿಎಂ ಹುದ್ದೆ ಬೇಕೆ?, ಸ್ವಲ್ಪ ಕಾಯುವ ತಾಳ್ಮೆ ಇರಲಿ]

ನಿಗಮ ಮಂಡಳಿಗಳಿಗೆ ನೇಮಕ : ನಿಗಮ ಮತ್ತು ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಕುರಿತ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುತ್ತಿದೆ. ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಪರಮೇಶ್ವರ್ ಅವರೊಂದಿಗೆ ಸಮಾಲೋಚನೆ ನಡೆಸಿ ಅರ್ಹ ಅಭ್ಯರ್ಥಿಗಳ ಪಟ್ಟಿ ತಯಾರು ಮಾಡಲಿದ್ದೇವೆ. ಪಟ್ಟಿಯನ್ನು ವರಿಷ್ಠರಿಗೆ ಕಳಿಸಿ, ಅವರ ಒಪ್ಪಿಗೆ ಪಡೆಯಲಾಗುತ್ತದೆ ಎಂದರು.

ಅಸಮಾಧಾನ ಖಚಿತ : ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ಹಲವಾರು ಶಾಸಕರು ಲಾಬಿ ನಡೆಸುತ್ತಿದ್ದಾರೆ. ಆದ್ದರಿಂದ ಯಾರನ್ನೇ ಸಂಪುಟಕ್ಕೆ ಸೇರಿಸಿಕೊಂಡರು ಉಳಿದವರು ಅಸಮಾಧಾನಗೊಳ್ಳುವುದು ಖಚಿತ. ಆದ್ದರಿಂದ ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆಗೆ ಕೈ ಹಾಕದಿರಲು ಸಿಎಂ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಉಪ ಮುಖ್ಯಮಂತ್ರಿ ಪಟ್ಟವಿಲ್ಲ : ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ತಡ ಮಾಡುತ್ತಿರುವ ಸಿದ್ದರಾಮಯ್ಯ ಅವರ ವಿರುದ್ಧ ಕೆಲವು ಕಾಂಗ್ರೆಸ್ ನಾಯಕರು ಅಸಮಾಧಾನ ಗೊಂಡಿದ್ದಾರೆ ಎಂದು ತಿಳಿದುಬಂದಿದೆ. ತಾವೇ ಖುದ್ದು ಎರಡು ಬಾರಿ ಈ ರಾಜ್ಯದ ಡಿಸಿಎಂ ಆಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಡಿಸಿಎಂ ಹುದ್ದೆ ಸೃಷ್ಟಿ ಬೇಡ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ವಾದ ಮಂಡಿಸುತ್ತಿರುವುದು ಕೆಲವು ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

English summary
Karnataka Chief Minister Siddaramaiah said, Congress high command decided to neither create a post of deputy chief minister nor expand the State Cabinet soon. Siddaramaiah is in Delhi from two days and meets party high command leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X