ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟಿಇಟಿ ಮರು ಪರೀಕ್ಷೆ ಇಲ್ಲ : ಕಿಮ್ಮನೆ ರತ್ನಾಕರ್

|
Google Oneindia Kannada News

ಬೆಂಗಳೂರು, ಜೂ. 24 : ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಯಾವುದೇ ಅಭ್ಯರ್ಥಿ ಅಥವ ಕೇಂದ್ರಗಳಿಂದ ದೂರು ಬಂದಿಲ್ಲ. ಆದ್ದರಿಂದ ಮರು ಪರೀಕ್ಷೆ ನಡೆಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ.

ಸೋಮವಾರದ ಮೊಲದ ದಿನದ ಅಧಿವೇಶನದಲ್ಲಿ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ವಿಧಾನಪರಿಷತ್ತಿನಲ್ಲಿ ಭಾನುವಾರ ನಡೆದ ಶಿಕ್ಷರ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ವಿಷಯವನ್ನು ಪ್ರಸ್ತಾಪಿಸಿದರು. ಶಿಕ್ಷಣ ಇಲಾಖೆ ನಿರ್ಲಕ್ಷ್ಯದಿಂದಾಗಿ ಆರೋಪಿ ಶಿವಕುಮಾರ್ ಕಳೆದ 6 ವರ್ಷದಿಂದ ಸತತವಾಗಿ ಪ್ರಶ್ನೆಪತ್ರಿಕೆ ಬಹಿರಂಗಗೊಳಿಸುತ್ತಿದ್ದಾನೆ ಎಂದು ದೂರಿದರು.

kimmane rathnakar

ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಇಲಾಖೆ ವಿಫಲವಾಗಿದೆ. ಆದ್ದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮರುಪರೀಕ್ಷೆ ನಡೆಸಬೇಕು ಎಂದು ಅವರು ಆಗ್ರಹಿಸಿದರು. [ಪರಿಷತ್ ಪ್ರತಿಪಕ್ಷ ನಾಯಕ ಈಶ್ವರಪ್ಪ]

ಪರಿಷತ್ತಿನಲ್ಲಿ ಹಾಜರಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ನಾರಾಯಣ ಸ್ವಾಮಿ ಅವರ ಪ್ರಶ್ನೆಗೆ ಉತ್ತರ ನೀಡಿ, ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧಿಸಿದಂತೆ ಯಾವುದೇ ಅಭ್ಯರ್ಥಿ ಅಥವಾ ಕೇಂದ್ರಗಳಿಂದ ದೂರು ಬಂದಿಲ್ಲ. ಈ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಯಾವುದೇ ಸಾಧ್ಯತೆಯಿಲ್ಲ. ತನಿಖೆಯ ವರದಿ ದೊರೆತ ಮೇಲೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. [ಮೊದಲ ದಿನದ ಕಲಾಪದ ಮುಖ್ಯಾಂಶಗಳು]

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವ ಆರೋಪಿ ಶಿವಕುಮಾರ್ ನಿವೃತ್ತ ಶಿಕ್ಷಕನಾಗಿರಬಹುದು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಶಿಕ್ಷಣ ಇಲಾಖೆಯ ಪಾತ್ರವಿಲ್ಲ. ಯಾವುದೇ ಅಧಿಕಾರಿಗಳು ಭಾಗಿಯಾಗಿಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.

ಸರ್ಕಾರ ಈ ಪ್ರಕರಣದವನ್ನು ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯ ಜತೆಗೆ ಇಲಾಖಾ ವಿಚಾರಣೆ ನಡೆಸುವಂತೆ ಪ್ರಧಾನ ಕಾರ್ಯದರ್ಶಿಗೆ ಸೂಚಿನೆ ನೀಡಲಾಗಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

10 ದಿನದಲ್ಲಿ ಪುಸ್ತಕ : ಪಿಯುಸಿ ಪಠ್ಯಪುಸ್ತಕ ವಿತರಣೆಯಲ್ಲಿ ವಿಳಂಬವಾಗಿದೆ. ಇನ್ನು 10 ದಿನಗಳಲ್ಲಿ ಎಲ್ಲ ಪುಸ್ತಕಗಳನ್ನು ಪೂರೈಸಲಾಗುತ್ತದೆ ಎಂದು ಸಚಿವ ಕಿಮ್ಮನೆ ರತ್ನಾಕರ ಪರಿಷತ್ತಿನಲ್ಲಿ ಭರವಸೆ ನೀಡಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಪುಸ್ತಕ ವಿತರಣೆ ವಿಳಂಬವಾಗದಂತೆ ಎಚ್ಚರ ವಹಿಸಲಾಗುವುದು. ಪ್ರಾಥಮಿಕ ತರಗತಿಗಳ ಪುಸ್ತಕ ವಿತರಣೆಗೆ ವ್ಯವಸ್ಥೆ ರೂಪಿಸಿರುವಂತೆ ವರ್ಷಾಂತ್ಯದೊಳಗೆ ಟೆಂಡರ್ ಕರೆದು ಮುಂಚಿತವಾಗಿಯೇ ಪುಸ್ತಕವು ಮಾರುಕಟ್ಟೆಯಲ್ಲಿರುವಂತೆ ಮಾಡುತ್ತೇವೆ ಎಂದು ಸಚಿವರು ಹೇಳಿದರು.

English summary
Primary and Secondary Education minister Kimmane Ratnakar told the Legislative Council on Monday that, there is no plan to conduct re-examination for Teachers Eligibility Test.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X