ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯ ಜಿಲ್ಲೆಯಲ್ಲಿ 1 ಲಕ್ಷ ಶೌಚಾಲಯ ನಿರ್ಮಾಣ :ರೋಹಿಣಿ

By Mahesh
|
Google Oneindia Kannada News

ಕೃಷ್ಣರಾಜ ಪೇಟೆ, ಜೂ.22: ಮಹಿಳೆಯರ ಸ್ವಾಭಿಮಾನದ ಸಂಕೇತವಾದ ಶೌಚಾಲಯಗಳನ್ನು ಗ್ರಾಮೀಣ ಪ್ರದೇಶದ ಪ್ರತಿಯೊಂದು ಕುಟುಂಬವೂ ಕಡ್ಡಾಯವಾಗಿ ನಿರ್ಮಿಸಿಕೊಂಡು ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ನಾಂದಿ ಹಾಡಬೇಕು. ನಿರ್ಮಲ್ ಭಾರತ್ ಯೋಜನೆಯಡಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಶೌಚಾಲಯ ನಿರ್ಮಾಣ ಗುರಿ ಹೊಂದಲಾಗಿದೆ ಎಂದು ಮಂಡ್ಯ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಪಟ್ಟಣದ ಖಾಸಿಂಖಾನ್ ಸಮುದಾಯ ಭವನದಲ್ಲಿ ನಿರ್ಮಲ ಭಾರತ ಅಭಿಯಾನದ ಅಂಗವಾಗಿ ಶೌಚಾಲಯಗಳ ನಿರ್ಮಾಣ ಕುರಿತು ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳು ಹಾಗೂ ಆಶಾ ಕಾರ್ಯಕತೆರ್ಯರಿಗೆ ಏರ್ಪಡಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ರೋಹಿಣಿ ಅವರು ಮಾತನಾಡಿದರು. [ಎಂ- ಆಸ್ತಿ ಅಪ್ ಮೂಲಕ ಇ ಖಾತಾ ಪಡೆಯಿರಿ: ರೋಹಿಣಿ]

'ದೇಶಕ್ಕೆ ಸ್ವಾತಂತ್ರ್ಯ ಬಂದು 65 ವರ್ಷಗಳು ಕಳೆಯುತ್ತಿದ್ದರೂ ಇಂದಿಗೂ ಗ್ರಾಮೀಣ ಪ್ರದೇಶದ ಶೇ.80ಕ್ಕೂ ಹೆಚ್ಚು ಕುಟುಂಬಗಳು ಶೌಚಾಲಯ ಗಳನ್ನು ನಿರ್ಮಿಸಿಕೊಂಡಿಲ್ಲ. ಗ್ರಾಮೀಣ ಪ್ರದೇಶದ ಜನರು ಬಯಲು ಶೌಚಾಲಯವನ್ನೇ ಅವಲಂಬಿಸಿ ಕೊಂಡಿರುವುದರಿಂದ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗು ತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.[ಅತ್ಯಾಚಾರ ನಿಲ್ಲಬೇಕಾದರೆ ಶೌಚಾಲಯ ಕಟ್ಟಿಸಿ]

Mandya district to get 1,02,000 toilets : Rohini Sindhuri

ಶೌಚಾಲಯ ನಿರ್ಮಾಣಕ್ಕೆ ಧನ ಸಹಾಯ: ಶೌಚಾಲಯವನ್ನು ನಿರ್ಮಿಸಿಕೊಳ್ಳುವ ಪ್ರತೀ ಕುಟುಂಬಕ್ಕೆ ಸಾಮಾನ್ಯ ವರ್ಗದವರಿಗೆ 10 ಸಾವಿರ ರೂ. ಹಾಗೂ ಪರಿಶಿಷ್ಟ ಜಾತಿ/ ವರ್ಗಗಳಿಗೆ 15 ಸಾವಿರ ರೂ.ಗಳ ಧನ ಸಹಾಯವನ್ನು ಸರಕಾರ ನೀಡುತ್ತಿದೆ. ಗ್ರಾಮೀಣ ಪ್ರದೇಶದ ಜನರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಕಡ್ಡಾಯವಾಗಿ ಶೌಚಾಲಯಗಳನ್ನು ನಿರ್ಮಿಸಿಕೊಂಡು ತಮ್ಮ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳುವಂತೆ ಅವರಿಗೆ ಅರಿವು ಮೂಡಿಸಬೇಕು ಎಂದು ಆಶಾ ಕಾರ್ಯಕತೆರ್ಯರಿಗೆ ತಿಳಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಂದು ಶೌಚಾಲಯ ರಹಿತ ಕುಟುಂಬಕ್ಕೂ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿಕೊಳ್ಳುವ ಬಗ್ಗೆ ಸುಧೀರ್ಘ ಚರ್ಚೆ ನಡೆಸಿ ಗ್ರಾಮ ಪಂಚಾಯಿತಿವಾರು ಬೇಸ್ ಲೈನ್ ಸರ್ವೆ ಹಾಗೂ ಶೌಚಾಲಯ ನಿರ್ಮಾಣವಾಗಿರುವ ಹಾಗೂ ನಿರ್ಮಾಣ ವಾಗಬೇಕಾಗಿರುವ ಶೌಚಾಲಯಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು.[ಇ-ಶೌಚಾಲಯ ಸ್ಥಾಪಿಸಲಿದೆ ಬಿಬಿಎಂಪಿ]

ಜಿಲ್ಲೆಗೆ 1,02,000 ವೈಯಕ್ತಿಕ ಶೌಚಾಲಯಗಳ ಗುರಿಯಿದ್ದು, ಅದರಲ್ಲಿ ತಾಲ್ಲೂಕಿಗೆ 15,000 ಗುರಿ ನೀಡಿದ್ದು ಡಿಸೆಂಬರ್ 2014ರ ಅಂತ್ಯದೊಳಗೆ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಲು ಎಲ್ಲಾ ಸಂಘ ಸಂಸ್ಥೆಗಳು, ಸಾರ್ವಜನಿಕರು ಸಹಕರಿಸಿ ಕಡ್ಡಾಯವಾಗಿ ಶೌಚಾಲಯಗಳನ್ನು ನಿರ್ಮಿಸಿಕೊಳ್ಳುವಂತೆ ತಿಳಿಸಿದರು.

ಈ ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಮಂಡ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳು, ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃಧ್ದಿ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಭಾರತ್ ನಿರ್ಮಾಣ್ ಸ್ವಯಂ ಸೇವಕರು ಭಾಗವಹಿಸಿದ್ದರು.

English summary
The district administration has decided to construct 1.02 lakh toilets in rural areas under the Nirmal Bharat Abhiyan this year, Rohini Sindhuri Dasari, Chief Executive Officer of Mandya Zilla Panchayat said. Absence of toilets at home robs women of basic human dignity she added.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X