ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಸಂಪುಟ ಸೇರ್ತಾರಾ ಪರಮೇಶ್ವರ್‌?

|
Google Oneindia Kannada News

ಬೆಂಗಳೂರು, ಆ.21 : ವಿಧಾನಸಭೆ ಉಪ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿ ವಾರಗಳು ಕಳೆದಿವೆ. ಕಾಂಗ್ರೆಸ್ ವಲಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಆದರೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಯಾವ ಹುದ್ದೆ ನೀಡುತ್ತಾರೆ? ಎಂಬುದು ಕುತೂಹಲ ಮೂಡಿಸಿದೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಆ.26ರಂದು ಸಮನ್ವಯ ಸಮತಿ ಸಭೆ ನಡೆಯಲಿದೆ. ಸಭೆಯಲ್ಲಿ ಸಚಿವ ಸಂಪುಟ ರಚನೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಆದರೆ, ಪರಮೇಶ್ವರ್ ಅವರ ವಿಚಾರವನ್ನು ಇತ್ಯರ್ಥಗೊಳಿಸದೇ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳವುದು ಅಸಾಧ್ಯ ಎಂಬುದು ಸಿಎಂಗೂ ತಿಳಿಸಿದೆ.

Parameshwar

ಹೈಕಮಾಂಡ್ ನಾಯಕರು ಒಪ್ಪಿಗೆ ನೀಡಿದರೆ ಪರಮೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವೆ ಎಂದು ಹೇಳಿರುವ ಸಿದ್ದರಾಮಯ್ಯ ಅವರು ಪರಮೇಶ್ವರ್ ಅವರಿಗೆ ಯಾವ ಹುದ್ದೆ ನೀಡಬೇಕು ಎಂಬ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ. ಕೇವಲ ಸಚಿವರಾಗಿ ಸಂಪುಟ ಸೇರುವುದಕ್ಕೆ ಪರಮೇಶ್ವರ್ ಒಪ್ಪುತ್ತಿಲ್ಲ. ಉಪಮುಖ್ಯಮಂತ್ರಿ ಹುದ್ದೆ ನೀಡಲು ಸಿದ್ದರಾಮಯ್ಯ ಸೇರಿದಂತೆ ಕೆಲವು ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. [ಸಂಪುಟ ವಿಸ್ತರಣೆ ಮಾತುಕತೆ]

ಸಚಿವರಾಗಿ ಸಂಪುಟ ಸೇರಿದರೆ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಸಂಪುಟ ವಿಸ್ತರಣೆ ಕಸರತ್ತು ಕಗ್ಗಂಟಾಗಿದೆ. ಸಮನ್ವಯ ಸಮಿತಿ ಸಭೆಯ ಬಳಿಕ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ದೆಹಲಿಗೆ ತೆರಳಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯೂ ಇದೆ.

ಸ್ಪೀಕರ್ ಹುದ್ದೆ ಯಾರಿಗೆ? : ಸಂಪುಟ ವಿಸ್ತರಣೆ ವೇಳೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ ಎಂದು ತಿಳಿದುಬಂದಿದೆ. ಕಾಗೋಡು ತಿಮ್ಮಪ್ಪ ಅವರು ಸಂಪುಟ ಸೇರಿದರೆ, ರಮೇಶ್ ಕುಮಾರ್ ಅವರಿಗೆ ಸ್ಪೀಕರ್ ಪಟ್ಟ ನೀಡುವ ಸಾಧ್ಯತೆ ಇದೆ. ಶಾಸಕರಾದ ಮಾಲೀಕಯ್ಯ ಗುತ್ತೇದಾರ್, ಕೆಬಿ ಕೋಳಿವಾಡ, ಬಸವರಾಜ್ ರಾಯರೆಡ್ಡಿ, ಶಿವಾನಂದ ಪಾಟೀಲ್, ಅರಕಲಗೂಡು ಮಂಜು, ನರೇಂದ್ರ ಸ್ವಾಮಿ ಸೇರಿದಂತೆ ಹಲವರು ಸಂಪುಟ ಸೇರುವ ಪ್ರಯತ್ನ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಐದು ಸ್ಥಾನಗಳು ಖಾಲಿ ಇವೆ. ಅವುಗಳಲ್ಲಿ ಒಂದು ಪರಮೇಶ್ವರ್‌ ಅವರಿಂದ ಭರ್ತಿಯಾದರೆ, ಉಳಿದ ನಾಲ್ಕು ಸ್ಥಾನಗಳು ಯಾರ ಪಾಲಾಗುತ್ತವೆ? ಎಂಬುದು ಕುತೂಹಲ ಮೂಡಿಸಿದೆ. ಆ.26ರಂದು ನಡೆಯುವ ಸಮನ್ವಯ ಸಮಿತಿ ಸಭೆಯಲ್ಲಿ ಸಂಪುಟ ವಿಸ್ತರಣೆಯ ಎಲ್ಲಾ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಇದೆ.

English summary
Karnataka Congress president Dr.G.Parameshwar asked the party high command to consider his request for deputy chief minister's post. The coordination panel will meet at KPCC office on August 26, may discuss about cabinet expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X