ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ.2ರಂದು ಕೆಲವು ಕೈದಿಗಳಿಗೆ ಬಿಡುಗಡೆ ಭಾಗ್ಯ

|
Google Oneindia Kannada News

ಬೆಂಗಳೂರು, ಸೆ. 15 : ಈ ಬಾರಿಯ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಕೆಲವು ಕೈದಿಗಳಿಗೆ ಬಿಡುಗಡೆ ಭಾಗ್ಯ ದೊರೆಯಲಿದೆ. ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 432 ಅನ್ವಯ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕೈದಿಗಳನ್ನು ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದ್ದು, ರಾಜ್ಯಪಾಲರು ಇದಕ್ಕೆ ಒಪ್ಪಿಗೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ ಅವರು, ಸಿಆರ್‌ಪಿಸಿ ಸೆಕ್ಷನ್ 432ರ ಅಡಿಯಲ್ಲಿ ಕೈದಿಗಳ ಬಿಡುಗಡೆಗೆ ಅನುಸರಿಸಬೇಕಾದ ಮಾರ್ಗಸೂಚಿಗಳಲ್ಲಿ ಬದಲಾವಣೆ ತರಲಾಗಿದೆ. ಕೈದಿಗಳ ಬಿಡುಗಡೆ ವಿಚಾರದಲ್ಲಿ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಿಲ್ಲ ಎಂದು ಸ್ಪಷ್ಟಪಡಿಸಿದರು.

TB Jayachandra

2006ರಿಂದಲೂ ಕೈದಿಗಳನ್ನು ಬಿಡುಗಡೆ ಮಾಡಿಲ್ಲ. ಆದ್ದರಿಂದ ಈ ಬಾರಿ ಅಕ್ಟೋಬರ್‌ 2ರ ಗಾಂಧಿ ಜಯಂತಿಯಂದು ಸಂವಿಧಾನದ 161ನೇ ವಿಧಿಯಂತೆ ರಾಜ್ಯಪಾಲರ ಒಪ್ಪಿಗೆ ಪಡೆದು ಕೈದಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಈ ಸಂಬಂಧ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಅವರು ಕೆಲವು ಸಲಹೆಗಳನ್ನು ನೀಡಿದ್ದಾರೆ ಎಂದು ಜಯಚಂದ್ರ ಅವರು ತಿಳಿಸಿದರು. [ಮೂರು ಜೈಲುಗಳಲ್ಲಿ ಕೈದಿಗಳ ನಿರಶನ]

ಮೋದಿ ಆಗಮಿಸುವ ನಿರೀಕ್ಷೆಯಿದೆ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.24ರಂದು 'ಫುಡ್ ಪಾರ್ಕ್' ಶಂಕುಸ್ಥಾಪನೆಗಾಗಿ ತುಮಕೂರಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಟಿ.ಬಿ.ಜಯಚಂದ್ರ ಅವರು ಹೇಳಿದ್ದಾರೆ. ಪ್ರಧಾನಿ ಆಗಮಿಸಿದರೆ ಶಿಷ್ಟಾಚಾರದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಜಯಚಂದ್ರ ಅವರು ತಿಳಿಸಿದರು. [ಪ್ರಧಾನಿ ಮೋದಿ ಸ್ವಾಗತಿಸಲು ಸಜ್ಜಾದ ಕರ್ನಾಟಕ]

ತನಿಖೆ ಬಗ್ಗೆ ಮಾಹಿತಿ ಪಡೆಯುತ್ತೇನೆ : ರಾಜಭವನದ ಮತ್ತು ಸರ್ಕಾರದ ನಡುವೆ ಉತ್ತಮ ಸಂಬಂಧವಿದೆ ಎಂದು ಟಿ.ಬಿ.ಜಯಚಂದ್ರ ಅವರು ಹೇಳಿದ್ದಾರೆ. ರಾಜ್ಯಪಾಲರು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ವಿರುದ್ಧ ತನಿಖೆಗೆ ಆದೇಶಿಸಿ, ನಿವೃತ್ತ ನ್ಯಾಯಮೂರ್ತಿ ಬಿ.ಪದ್ಮರಾಜ್ ನೇತೃತ್ವದಲ್ಲಿ ಸಮಿತಿ ರಚಿಸಿರುವುದು ಮಾಧ್ಯಮಗಳಿಂದ ತಿಳಿದಿದೆ. ಈ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡುತ್ತೇನೆ ಎಂದರು.

English summary
Prisoners who had completed 14 years of their sentence, would be released in consultation with Governor V.R. Vala on October 2 Gandhi Jayanti said, Law and Parliamentary Affairs Minister T.B. Jayachandra on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X