ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಳೆ ಆರ್ಭಟ:ತುಂಗಭದ್ರಾ ಜಲಾಶಯ ಭರ್ತಿ‌ಗೆ ಕ್ಷಣಗಣನೆ

By Super
|
Google Oneindia Kannada News

ಬೆಂಗಳೂರು, ಆ.1: ಕೃಷ್ಣೆಯ ಉಗಮ ಸ್ಥಾನ ಮಹಾಬಲೇಶ್ವರ ಮತ್ತು ಮಲೆನಾಡಿನಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಮಳೆಯ ಹೆಚ್ಚಳದಿಂದ ನದಿಗಳು ತುಂಬಿ ಹರಿಯುತ್ತಿದ್ದು ಲಿಂಗನಮಕ್ಕಿ, ತುಂಗಭದ್ರಾ, ಕೆಆರ್‌ಎಸ್‌ ಜಲಾಶಯಗಳ ಒಳಹರಿವು ಹೆಚ್ಚಿದೆ.

ಚಿಕ್ಕಮಗಳೂರು, ಉತ್ತರ ಕನ್ನಡ ಶಿವಮೊಗ್ಗ,ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಲೇ ಇದ್ದು ಸಾವಿರಾರು ಎಕರೆ ಕೃಷಿ ಭೂಮಿ, ತೋಟ ಜಲಾವೃತಗೊಂಡಿವೆ.ಹತ್ತಾರು ಮನೆಗಳು ಕುಸಿದಿದ್ದು ವ್ಯಾಪಕ ಹಾನಿ ಸಂಭವಿಸಿದೆ.

ತುಂಗಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ : ತುಂಗಭದ್ರಾ ಜಲಾಶಯ ಭರ್ತಿಗೆ ಕೇವಲ 3 ಅಡಿ ಮಾತ್ರ ಬಾಕಿ ಉಳಿದಿದ್ದು, ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಿ, ಹೆಚ್ಚುವರಿ ನೀರನ್ನು ಕ್ರಸ್ಟ್ ಗೇಟ್ ಮೂಲಕ ನದಿಗೆ ಯಾವುದೇ ಕ್ಷಣದಲ್ಲಿ ನೀರು ಬಿಡುವ ಸಾಧ್ಯತೆ ಇದ್ದು, ನದಿ ಪಾತ್ರದಲ್ಲಿನ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

1633 ಅಡಿ ಎತ್ತರದ ತುಂಗಭದ್ರಾ ಜಲಾಶಯದ ಪ್ರಸ್ತುತ ನೀರಿನ ಮಟ್ಟ 1630.13 ಅಡಿ ಇದ್ದು, 47,050 ಕ್ಯೂಸೆಕ್‍ ನೀರು ಹರಿದು ಬರುತ್ತಿದ್ದು, 4,163 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಜಲಾಶಯವು ಶೀಘ್ರ ಭರ್ತಿಯಾಗುವ ಸಾಧ್ಯತೆಗಳಿದೆ. ಯಾವುದೇ ಸಮಯದಲ್ಲಿ ಜಲಾಶಯದಿಂದ ತುಂಗಭದ್ರಾ ನದಿಗೆ ಹೆಚ್ಚುವರಿ ನೀರನ್ನು ಹೊರಬಿಡಲಾಗುವುದರಿಂದ, ಜಲಾಶಯದ ಕೆಳಭಾಗದ ನದಿ ಪಾತ್ರದಲ್ಲಿ ವಾಸಿಸುವ ಸಾರ್ವಜನಿಕರು ತಮ್ಮ ಜನ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಭೋಜಾನಾಯ್ಕ ಕಟ್ಟಿಮನಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಮಳೆ ಸಂಬಂಧಿ ಅವಘಡಗಳಿಗೆ ನಾಲ್ವರು ಬಲಿಯಾಗಿದ್ದಾರೆ. ರಾಣೇಬೆನ್ನೂರಿನ ಎಕೆಜಿ ಕಾಲೊನಿಯಲ್ಲಿ ಮನೆ ಕುಸಿದು ರಸೂಲ್ಲಾಬಿ , ಫಾತಿಮಾಬಿ ಮಹಬೂಬ್‌ಸಾಬ್ ಬೆಳವಿಗಿ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕೆರೆಕೊಪ್ಪ ಗ್ರಾಮದ ಬಳಿ ಬುಧವಾರ ರಾತ್ರಿ ಉಕ್ಕಿ ಹರಿಯುತ್ತಿದ್ದ ಮೋರಿಯಿಂದ ಕಾರು ಕೆಳಗುರುಳಿ ಇಬ್ಬರು ಸ್ಥಳದಲ್ಲಿಯೇ ಮೃತ ಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ತುಂಗಾ, ವರದಾ, ಮಾಲತಿ, ದಂಡಾವತಿ, ಕುಮದ್ವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಗಾ ನದಿಯ ಪ್ರವಾಹದಿಂದ ಮಂಡಗದ್ದೆಯಲ್ಲಿ ಪಕ್ಷಿಧಾಮ ಅರ್ಧದಷ್ಟು ಮುಳುಗಿದೆ.

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಗುರುವಾರ 95,260 ಕ್ಯೂಸೆಕ್‌ ನೀರು ಬರುತ್ತಿದ್ದು ಕೃಷ್ಣಾ ಮತ್ತು ಉಪನದಿಗಳ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕೆಳಮಟ್ಟದ ಆರೂ ಸೇತುವೆಗಳು ಮುಳುಗಡೆಯಾಗಿ ಸಂಚಾರಕ್ಕೆ ಅಡಚಣೆಯಾಗಿದೆ.

ಉತ್ತರ ಕನ್ನಡದ ಕುಮಟಾ ತಾಲೂಕಿನನಲ್ಲಿ ಅಘನಾಶಿನಿ ನದಿ ತುಂಬಿ ಹರಿಯುತ್ತಿದ್ದು, ಐಗಳಕೊರ್ವೆ‌ ಗ್ರಾಮ ಸಂಪೂರ್ಣ ಜಲಾವೃತವಾಗಿದೆ. ಈ ಗ್ರಾಮದಲ್ಲಿ 150 ಕುಟುಂಬಗಳಿಗೆ ಸಂಕಷ್ಟ ಎದುರಾಗಿದೆ.

ಭಾರೀ ಮಳೆ: ಯಾವ ಜಲಾಶಯದಲ್ಲಿ ಎಷ್ಟು ನೀರಿದೆ?
ಜಲಾಶಯ ಗರಿಷ್ಠ ಮಟ್ಟ ಇಂದಿನ ನೀರಿನ ಮಟ್ಟ ಕಳೆದ ವರ್ಷದ ಮಟ್ಟ
ಲಿಂಗನಮಕ್ಕಿ 1819 1794.15 1813.50
ತುಂಗಭದ್ರಾ 1633.00 1629.78 1631.02
ಹಾರಂಗಿ 2,859 2857.00 2856.00
ಕೆಆರ್‌ಎಸ್‌‌ 124.80 114.50 124.80
ಹೇಮಾವತಿ 2922 2,916.70 2,921.40
ಕಬಿನಿ 2284 2281.00 2280.00
ಆಲಮಟ್ಟಿ 519.60 ಮೀ. 518.60 ಮೀ. 517.20 ಮೀ.

* ನೀರಿನ ಮಟ್ಟ ಅಡಿಗಳಲ್ಲಿ

English summary
Water-levels in major reservoirs across the Shimoga district are increasing owing to heavy rains in the catchment areas of river Tunga and Bhadra. Cloudy weather prevailed throughout the day on Friday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X