ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ವಿಸ್ತರಣೆ ಮಾಡಿ ಸಿದ್ದರಾಮಯ್ಯಗೆ ಶಾಸಕರ ಒತ್ತಡ

|
Google Oneindia Kannada News

ಬೆಂಗಳೂರು, ಜು. 24 : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಪುಟ ವಿಸ್ತರಣೆ ಮಾಡಿ ಎಂದು ಶಾಸಕರು ಮತ್ತೊಮ್ಮೆ ಒತ್ತಾಯಿಸಿದ್ದಾರೆ. ಉಪ ಚುನಾವಣೆಗೆ ಮೊದಲು ಸಂಪುಟ ವಿಸ್ತರಣೆ, ನಿಗಮ ಮಂಗಳಿ ನೇಮಕ ಪ್ರಕ್ರಿಯೆಗಳನ್ನು ಮುಗಿಸುವಂತೆ ಒತ್ತಡ ಹೇರಿದ್ದಾರೆ. ಅಸಮರ್ಥ ಸಚಿವರನ್ನು ತೆಗೆದುಹಾಕಿ ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಉಪ ಚುನಾವಣೆ ತಯಾರಿ, ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕ ಇನ್ನಿತರ ವಿಚಾರಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ 40 ಕ್ಕೂ ಹೆಚ್ಚು ಶಾಸಕರೊಂದಿಗೆ ಉಪಹಾರ ಕೂಟ ಆಯೋಜಿಸಿದ್ದರು. ಉಪಹಾರ ಕೂಟದಲ್ಲಿ ಭಾಗವಹಿಸಿದ್ದ ಶಾಸಕರು ಸಂಪುಟ ವಿಸ್ತರಣೆ ಮಾಡಿ ಎಂದು ಸಿಎಂಗೆ ಮನವಿ ಮಾಡಿದರು.

cm Siddaramaiah

ಹಲವು ಸಚಿವರ ವಿರುದ್ಧ ದೂರುಗಳನ್ನು ಹೇಳಿದ ಶಾಸಕರು ಸಂಪುಟ ವಿಸ್ತರಣೆ ಮಾಡಿ, ಕೆಲವು ನಿಷ್ಕ್ರಿಯ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಆ.21ರಂದು ನಡೆಯಲಿರುವ ಉಪ ಚುನಾವಣೆಗೂ ಮೊದಲು ನಿಗಮ ಮಂಡಳಿಗಳಿಗೆ ನೇಮಕಾತಿಗಳನ್ನು ಪೂರ್ಣಗೊಳಿಸಬೇಕು. ಶಾಸಕರು ಮತ್ತು ನಿಷ್ಠಾವಂತ ಕಾರ್ಯಕರ್ತರಿಗೆ ನೇಮಕದಲ್ಲಿ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು. [ಉಪ ಚುನಾವಣೆ ವೇಳಾಪಟ್ಟಿ]

ಸಿಎಂ ಸಿದ್ದರಾಮಯ್ಯ ತಂತ್ರ : ಶಾಸಕರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಕ್ಕೆ ನಾವು ಸಿದ್ಧರಿದ್ದೇವೆ. ಪಕ್ಷದ ಹೈಕಮಾಂಡ್ ನಾಯಕರು ಈ ಪ್ರಕ್ರಿಯೆಗಳಿಗೆ ಅಂತಿಮ ಒಪ್ಪಿಗೆ ನೀಡಿಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಶಾಸಕರ ಅಸಮಾಧಾನ ಕಡಿಮೆ ಮಾಡಲು ಮುಂದಾದರು.

ಸದ್ಯ ಎಲ್ಲಾ ನಾಯಕರು ಉಪ ಚುನಾವಣೆಯತ್ತ ಗಮನಹರಿಸೋಣ ಮೂರು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಅನುಭವಿ ಶಾಸಕರು ಹೊರಬೇಕು ಎಂದು ಸಲಹೆ ನೀಡಿದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಶಾಸಕರು, ಎಲ್ಲಾ ನಾಯಕರು ಒಟ್ಟಾಗಿ ಗೆಲುವಿಗಾಗಿ ಕಾರ್ಯತಂತ್ರ ರೂಪಿಸೋಣ ಎಂದರು. [ಉಪ ಚುನಾವಣೆ : ಮೂರು ಕ್ಷೇತ್ರಗಳಿಗೆ ವೀಕ್ಷಕರ ನೇಮಕ]

ವೀಕ್ಷಕರ ನೇಮಕ : ಉಪ ಚುನಾವಣೆ ನಡೆಯಲಿರುವ ಶಿಕಾರಿಪುರ, ಬಳ್ಳಾರಿ ಗ್ರಾಮಾಂತರ ಮತ್ತು ಚಿಕ್ಕೋಡಿ ಸದಲಗಾ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೆಪಿಸಿಸಿಯಿಂದ ಮೂವರು ವೀಕ್ಷಕರನ್ನು ನೇಮಕ ಮಾಡಲಾಗುತ್ತದೆ ಎಂದು ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದರು. ಆಯಾ ಕ್ಷೇತ್ರಗಳಿಗೆ ಭೇಟಿ ನೀಡಿ ಸ್ಥಳೀಯ ಘಟಕ ಹಾಗೂ ಉಸ್ತುವಾರಿ ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಿ ವೀಕ್ಷಕರು ಕೆಪಿಸಿಸಿಗೆ ವರದಿ ನೀಡಲಿದ್ದಾರೆ.

ದೆಹಲಿಗೆ ಭೇಟಿ : ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸುವ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಆಗಸ್ಟ್ ಮೊದಲ ವಾರ ದಿಲ್ಲಿಗೆ ತೆರಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

English summary
A group of senior Congress MLAs, aspiring to become ministers, met Chief Minister Siddaramaiah on Wednesday and urged him to revamp the Council of Ministers before the by elections to the three Assembly constituencies scheduled for August 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X