ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೈ ಎಲೆಕ್ಷನ್ ನಂತರ, ಸಿದ್ದು ಸರ್ಕಾರಕ್ಕೆ ಬೈ ಬೈ

By Mahesh
|
Google Oneindia Kannada News

ದಾವಣಗೆರೆ, ಆ.24-ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಪ ಚುನಾವಣೆ ಫಲಿತಾಂಶ ಬಂದ ನಂತರ ಕುಸಿದು ಬೀಳಲಿದೆ. ಬೈ ಎಲೆಕ್ಷನ್ ನಂತರ ಆ.26ರಂದು ಸರ್ಕಾರ ಪತನವಾಗಲಿದ್ದು, ಸಿದ್ದರಾಮಯ್ಯ ಅವರಿಗೆ ಬೈ ಬೈ ಹೇಳಲು ಸಿದ್ದರಾಗಿ ಎಂದು ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ ನುಡಿದಿದ್ದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, 'ಅ.26 ರಂದು ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದರು. ಕಾಂಗ್ರೆಸ್ ಪಕ್ಷದಲ್ಲಿರುವ ಆಂತರಿಕ ಕಚ್ಚಾಟ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರ ಗುಂಪುಗಾರಿಕೆ, ಸಿದ್ದರಾಮಯ್ಯ ಸೇರಿದಂತೆ ಅಸಮರ್ಥ ಮಂತ್ರಿಗಳ ನಡವಳಿಕೆಯಿಂದ ಶಾಸಕರು ಬೇಸತ್ತಿದ್ದಾರೆ. ಈ ಭಿನ್ನಾಭಿಪ್ರಾಯಗಳಿಂದಲೇ ಸರ್ಕಾರ ಪತನವಾಗಲಿದೆ ಎಂದರು.

ಆ.26 ರಂದು ರಾಜ್ಯಕ್ಕೆ ಕಾಂಗ್ರೆಸ್‍ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಆಗಮಿಸಲಿದ್ದು ಅಂದು ಸರ್ಕಾರದ ವಿರುದ್ಧ ಪಕ್ಷದವರೇ ತಿರುಗಿ ಬೀಳಲಿದ್ದಾರೆ. ಸಂಪುಟ ವಿಸ್ತರಣೆ ಸರ್ಕಸ್ ಸಿದ್ದರಾಮಯ್ಯ ಅವರಿಗೆ ತಿರುಗುಬಾಣವಾಗಲಿದೆ ಎಂದರು.

Siddaramaiah Government set to collapse on Aug.26 : Renukacharya

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ಸಿದ್ದರಾಮಯ್ಯ ಸರ್ಕಾರ ಇದೆಯೋ ಇಲ್ಲವೋ ಎಂಬ ಅನುಮಾನಗಳು ಕಾಡುತ್ತಿವೆ. ಅಲ್ಲದೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಕೂಡ ಸಿದ್ದು ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳೇ ಕಾಂಗ್ರೆಸ್ಸಿಗೆ ಮುಳುವಾಗಲಿದೆ.

ಚುನಾವಣೆ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ಆರೋಪ ಸಹಜ. ಆದರೆ ಸಿದ್ದರಾಮಯ್ಯನವರು ಇಂದಿಗೂ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಸಿಎಂ ಕಚೇರಿಯಲ್ಲಿ ಪ್ರಧಾನಿ ಭಾವಚಿತ್ರ ಅಳವಡಿಸಿಕೊಳ್ಳದ ಮುಖ್ಯಮಂತ್ರಿಗಳ ನಡೆ ಸಂವಿಧಾನ ವಿರೋಧಿಯಾಗಿದೆ ಎಂದು ರೇಣುಕಾಚಾರ್ಯ ಆಕ್ರೋಶವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ ಹೈಕಮಾಂಡ್ ಮುಖ್ಯಮಂತ್ರಿಗಳಿಗೆ ನೀಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ ಅವರು ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಕೊಂಡಿರುವ ಮುಖ್ಯಮಂತ್ರಿಗಳ ನಿರ್ಧಾರ ಸ್ವಾಗತಾರ್ಹ ಎಂದರು.

ಇದೇ ವೇಳೆ ಡಾ.ಯು.ಆರ್.ಅನಂತಮೂರ್ತಿ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ಅವರು ಕೆಲ ಕಿಡಿಗೇಡಿಗಳು ಸಾಹಿತಿಗಳ ನಿಧನಕ್ಕೆ ಸಂಭ್ರಮಾಚರಣೆ ಮಾಡಿರುವುದನ್ನು ಖಂಡಿಸಿದರು. ಸಂಭ್ರಮಾಚರಣೆ ಮಾಡಿದವರು ವಿಕೃತ ಮನಸ್ಸಿನವರು. ಬಿಜೆಪಿಗೆ ಕಪ್ಪು ಮಸಿ ಬಳಿಯಲು ಈ ಕೃತ್ಯ ಮಾಡಲಾಗಿದೆ ಎಂದು ದೂರಿದರು.

English summary
Davangere: Siddaramaiah Government set to collapse on Aug.26 after hearing By poll results on Aug.25 said former minister MP. Renukacharya. Internal crisis in Congress become worse and even Digvijay Singh can't help it. Siddaramaiah is most un constitutional CM ever Karnataka had.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X