ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಚಾರದ ಪಾಂಚಜನ್ಯ ಮೊಳಗಿಸಿದ ಎಸ್ಎಂ ಕೃಷ್ಣ

|
Google Oneindia Kannada News

ಬೆಂಗಳೂರು, ಏ.2 : ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃಷ್ಣ ಬುಧವಾರ ಪಕ್ಷದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರವಾಗಿ ಮತಯಾಚಿಸಿದರು.

ಪ್ರಚಾರ ಕಾರ್ಯ ಆರಂಭಕ್ಕೂ ಮೊದಲು ಕೃಷ್ಣ ಸದಾಶಿವನಗರದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ನಂದನ್ ನಿಲೇಕಣಿ, ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಸಿ.ನಾರಾಯಣಸ್ವಾಮಿ, ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅರ್ಷದ್, ಬೆ.ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಿಕೆ ಸುರೇಶ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಚಿತ್ರಗಳಲ್ಲಿ ನೋಡಿ ಕೃಷ್ಣ ಪ್ರಚಾರ [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

ಮನೆಯಲ್ಲಿ ಪತ್ರಿಕಾಗೋಷ್ಠಿ

ಮನೆಯಲ್ಲಿ ಪತ್ರಿಕಾಗೋಷ್ಠಿ

ಚುನಾವಣಾ ಪ್ರಚಾರ ಆರಂಭಕ್ಕೂ ಮುನ್ನ ಎಸ್ಎಂ ಕೃಷ್ಣ ಸದಾಶಿವನಗರದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ದೇಶದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಅಲೆಯನ್ನು ಕೃತಕವಾಗಿ ಸೃಷ್ಟಿಸಲಾಗುತ್ತಿದೆ. ದೇಶದಲ್ಲಿ ಈಗ ಯಾವ ಅಲೆಯೂ ಇಲ್ಲ. 1971ರಲ್ಲಿ ಇಂದಿರಾ ಗಾಂಧಿ ಅವರ ಅಲೆ ಹಾಗೂ 1994ರಲ್ಲಿ ರಾಜೀವ್ ಗಾಂಧಿ ಅವರ ಅಲೆ ಇತ್ತು. ಆದರೆ ಈಗ ಮೋದಿ ಅಲೆಯನ್ನು ಕೃತಕವಾಗಿ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದರು.

ಎಲ್ಲಾ ನಾಯಕರೊಂದಿಗೆ ಪ್ರಚಾರ

ಎಲ್ಲಾ ನಾಯಕರೊಂದಿಗೆ ಪ್ರಚಾರ

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ನಂದನ್ ನಿಲೇಕಣಿ, ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಸಿ.ನಾರಾಯಣಸ್ವಾಮಿ, ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅರ್ಷದ್, ಬೆ.ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಿಕೆ ಸುರೇಶ್ ಮುಂತಾದವರು ಕೃಷ್ಣ ಅವರು ಪ್ರಚಾರ ಆರಂಭಿಸುವಾಗ ಅವರ ಜೊತೆಗಿದ್ದರು.

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಪ್ರಚಾರ

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಪ್ರಚಾರ

ಎಸ್.ಎಂ.ಕೃಷ್ಣ ಬುಧವಾರ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ಸಚಿವ ರೋಷನ್ ಬೇಗ್ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅರ್ಷದ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಲೇಕಣಿ ಶ್ಲಾಘಿಸಿದ ಕೃಷ್ಣ

ನಿಲೇಕಣಿ ಶ್ಲಾಘಿಸಿದ ಕೃಷ್ಣ

ಬೆಂಗಳೂರು ದಕ್ಷಿಣ ಕ್ಷೇತ್ರದ ಪಕ್ಷದ ಅಭ್ಯರ್ಥಿ ನಂದನ್ ನಿಲೇಕಣಿಯವರ ಸಾಧನೆಗಳನ್ನು ಶ್ಲಾಘಿಸಿದ ಕೃಷ್ಣ, ನಿಲೇಕಣೀ ಅವರಂತಹ ಪ್ರಾಮಾಣಿಕ ವ್ಯಕ್ತಿ ರಾಜಕೀಯಕ್ಕೆ ಬಂದಿರುವುದು, ಅದರಲ್ಲಿಯೂ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುವುದು ಸಂತಸದ ವಿಷಯ ಎಂದರು. ತಾವು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಬಿಎಟಿಎಫ್‍ ಮುನ್ನೆಡೆಸುತ್ತ ನಂದನ್ ಎಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡಿದ್ದರು ಎಂಬುದನ್ನು ಅವರು ನೆನಪಿಸಿಕೊಂಡು, ಮೆಚ್ಚಿಗೆ ವ್ಯಕ್ತಪಡಿಸಿದರು.

ಇಂದಿನಿಂದ ಸಕ್ರಿಯವಾಗಿ ಪ್ರಚಾರ

ಇಂದಿನಿಂದ ಸಕ್ರಿಯವಾಗಿ ಪ್ರಚಾರ

ಇಂದಿನಿಂದ ಸಕ್ರಿಯವಾಗಿ ಚುಣಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದೇನೆ. ಬೆಂಗಳೂರಿನಲ್ಲಿ ಒಂದು ಹಂತದ ಪ್ರಚಾರ ಮುಗಿಸಿ ನಂತರ ರಾಜ್ಯದ ಇತರ ಜಿಲ್ಲೆಗಳಲ್ಲಿ ಪ್ರಚಾರ ನಡೆಸುತ್ತೇನೆ ಎಂದು ಕೃಷ್ಣ ಹೇಳಿದರು.

ಮೂವರು ಗೆಲ್ಲುತ್ತಾರೆ

ಮೂವರು ಗೆಲ್ಲುತ್ತಾರೆ

ಬೆಂಗಳೂರಿನಲ್ಲಿ ಪಕ್ಷದ ಮೂವರು ಅಭ್ಯರ್ಥಿಗಳು ಜಯಗಳಿಸುತ್ತಾರೆ ಎಂದು ಹೇಳಿದ ಕೃಷ್ಣ. ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. [ಚಿತ್ರಗಳಲ್ಲಿ ನೋಡಿ ಎಸ್ಎಂ ಕೃಷ್ಣ ಪ್ರಚಾರ]

English summary
Elections 2014 : Senior Congress leader SM Krishna on Wednesday launched his election campaign for the party's candidates with a scathing attack on Narendra Modi and the Bharatiya Janata Party (BJP). He said, There is no such thing as a Modi wave in the country. Such an illusion is being created by vested interests.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X