ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ 2014ರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟ

|
Google Oneindia Kannada News

ಬೆಂಗಳೂರು, ಮೇ.12 : 2013-14ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 12ರ ಸೋಮವಾರ ಪ್ರಕಟಗೊಂಡಿದೆ. ಎಂದಿನಂತೆ ಒನ್ಇಂಡಿಯಾ ಕನ್ನಡ ಮತ್ತು ಕರಿಯರ್ ಇಂಡಿಯಾ ವೆಬ್ ತಾಣಗಳಲ್ಲಿ ಫಲಿತಾಂಶ ಅಂಕಪಟ್ಟಿಗಳ ಸಮೇತ ಲಭ್ಯವಿರಲಿದೆ.

ಮಲ್ಲೇಶ್ವರಂನಲ್ಲಿರುವ ಎಸ್ಎಸ್ಎಲ್‌ಸಿ ಬೋರ್ಡ್ ನಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಫಲಿತಾಂಶವನ್ನು ಪ್ರಕಟಿಸಿದರು. ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಪೋಷಕರು ಧೈರ್ಯ ತುಂಬಬೇಕು. ಅವರನ್ನು ಅಪಹಾಸ್ಯ ಮಾಡಬಾರದು ಎಂದು ಅವರು ಮನವಿ ಮಾಡಿದರು. ಈ ವರ್ಷ ಒಟ್ಟಾರೆ ಶೇ 81.19 ಫಲಿತಾಂಶ ಬಂದಿದ್ದು, ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ ಎಂದರು.

SSLC exam 2014 results

ಎಸ್ಸೆಸ್ಸೆಲ್ಸಿ ಫಲಿತಾಂಶ Now Online

2013-14ನೇ ಫಲಿತಾಂಶದಲ್ಲಿ ಚಿಕ್ಕೋಡಿ ಪ್ರಥಮ ಸ್ಥಾನ ಪಡೆದಿದ್ದರೆ, ಶಿರಸಿ ಎರಡನೇ ಸ್ಥಾನ ಪಡೆದಿದೆ. ಮೂರನೇ ಸ್ಥಾನವೂ ಬೆಳಗಾವಿ ಜಿಲ್ಲೆಯ ಪಾಲಾಗಿದೆ. ಬೀದರ್ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. 17 ಶಾಲೆಗಳಲ್ಲಿ ಈ ಬಾರಿ ಶೂನ್ಯ ಫಲಿತಾಂಶ ಬಂದಿದೆ. ಆದರೆ, ಯಾವುದೇ ಸರ್ಕಾರಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಮಂಗಳವಾರ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು. ಸೋಮವಾರ ಇಂಟರ್ ನೆಟ್ ನಲ್ಲಿ ಫಲಿತಾಂಶ ಲಭ್ಯವಿರಲಿದೆ ಎಂದರು. 625ಕ್ಕೆ 622 ಅಂಕ ಪಡೆದ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ ಎಂದು ಹೇಳಿದ ಸಚಿವರು ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಒಟ್ಟು 2,233 ಶಾಲೆಗಳಲ್ಲಿ ಶೇ 100ರಷ್ಟು ಫಲಿತಾಂಶ ಬಂದಿದೆ. ಇದರಲ್ಲಿ 628 ಸರ್ಕಾರಿ ಶಾಲೆಗಳು ಸೇರಿವೆ. ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಹಾಗೂ ಉತ್ತರ ಪತ್ರಿಕೆ ಪ್ರತಿ ಪಡೆಯಲು ಮೇ 22 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 28 ಕಡೆಯ ದಿನವಾಗಿದೆ ಎಂದು ಕಿಮ್ಮನೆ ರತ್ನಾಕರ್ ತಿಳಿಸಿದರು.

English summary
Karnataka Secondary education Examination Board (KSEEB) announced SSLC board examination 2014 results on Monday, May 12.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X