ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ನಿರ್ಣಯಗಳು

By ಐಸಾಕ್ ರಿಚರ್ಡ್, ಮಂಗಳೂರು
|
Google Oneindia Kannada News

ಉಡುಪಿ, ಜೂ.22 : ಬ್ರಹ್ಮಾವರ, ಬೈಂದೂರು ಮತ್ತು ಹೆಬ್ರಿಯನ್ನು ತಾಲೂಕನ್ನಾಗಿ ಘೋಷಿಸಬೇಕು, ರಾಜ್ಯದ ಆಂಗ್ಲಮಾಧ್ಯಮ ಪ್ರೌಢಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಬೇಕು ಎಂಬ ನಿರ್ಣಯವನ್ನು ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ತೆಗೆದುಕೊಳ್ಳಲಾಗಿದ್ದು, ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಉಡುಪಿ ಜಿಲ್ಲಾ ಒಂಭತ್ತನೇ ಕನ್ನಡ ಸಾಹಿತ್ಯ ಸಮ್ಮೇಳನ ಜೂ.20 ಮತ್ತು 21 ರಂದು ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ನಡೆಯಿತು. ಸಮ್ಮೇಳನದ ಅಂತಿಮ ದಿನವಾದ ಶನಿವಾರ ಎರಡು ನಿರ್ಣಯಗಳನ್ನು ಕೈಗೊಂಡು, ಅದನ್ನು ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಮಾರ್ ಸೊರಕೆ ಅವರಿಗೆ ಸಲ್ಲಿಸಲಾಯಿತು.

ಕವಿ, ಕತೆಗಾರ, ನಾಟಕಕಾರ ಪ್ರೊ.ರಾಮದಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ 9ನೇ ಜಿಲ್ಲಾ ಸಾಹಿತ್ಯ ಸಮ್ಮೇಳನವು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯ ಸ್ಥಿತಿ-ಗತಿ, ಉಳಿವಿಗೆ ಮಾಡಬೇಕಾದ ಪ್ರಯತ್ನಗಳ ಬಗ್ಗೆ ಬೆಳಕು ಚೆಲ್ಲಿತು. ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕೆ.ಪಿ.ರಾವ್‌, ಆರ್‌.ಎಲ್‌.ಡಯಾಸ್‌, ಪ್ರೊ. ಶ್ರೀಪತಿ ತಂತ್ರಿ, ಪಿ.ಎನ್‌.ಆಚಾರ್ಯ ಮುಂತಾದವರನ್ನು ಸಮ್ಮಾನಿಸಲಾಯಿತು. [ಈಶಪ್ರಿಯ ತೀರ್ಥ ಸ್ವಾಮೀಜಿ ಅದಮಾರು ಮಠಾಧಿಪತಿ]

ಸಮ್ಮೇಳನದ ನಿರ್ಣಯಗಳು : ಸಮ್ಮಳೇನದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕದ ಅನೇಕ ಆಂಗ್ಲಮಾಧ್ಯಮ ಪ್ರೌಢಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಕಲಿಯಲು ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಅವಕಾಶ ಮಾಡಿಕೊಡುತ್ತಿಲ್ಲ. ಆದ್ದರಿಂದ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಯಿತು.

Udupi

ಈ ಹಿಂದೆ ಘೋಷಿಸಿದಂತೆ ಬ್ರಹ್ಮಾವರ ಮತ್ತು ಬೈಂದೂರು ತಾಲೂಕುಗಳು ಅಸ್ತಿತ್ವಕ್ಕೆ ಬರಬೇಕು ಮತ್ತು ಹೆಬ್ರಿಯನ್ನು ಸಹ ತಾಲೂಕನ್ನಾಗಿ ಘೋಷಿಸಬೇಕು ಎಂಬ ನಿರ್ಣಯವನ್ನು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಸಚಿವ ವಿನಯ ಕುಮಾರ್‌ ಸೊರಕೆ ಅವರಿಗೆ ನೀಡಿದರು.

ಸಮ್ಮೇಳನದ ನಿರ್ಣಯಗಳನ್ನು ಸ್ವೀಕರಿಸಿ ಮಾತನಾಡಿದ ಸಚಿವ ಸೊರಕೆ ಅವರು, ಬ್ರಹ್ಮಾವರ ಮತ್ತು ಬೈಂದೂರು ತಾಲೂಕುಗಳ ರಚನೆಗೆ ಪೂರ್ವಭಾವಿಯಾಗಿ ವಿಶೇಷ ತಹಶೀಲ್ದಾರ್‌ಗಳನ್ನು ನೇಮಕ ಮಾಡಲಾಗಿದೆ. ಹೆಬ್ರಿಯ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಮ್ಮೇಳನಾಧ್ಯಕ್ಷ ಪ್ರೊ.ರಾಮದಾಸ್‌, ಶಾಸಕ ಪ್ರಮೋದ್‌ ಮಧ್ವರಾಜ್‌, ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್‌, ಸಾಹಿತಿ ಅಂಬಾತನಯ ಮುದ್ರಾಡಿ, ನಗರಸಭಾಧ್ಯಕ್ಷ ಯುವರಾಜ್‌ ಮುಂತಾದವರು ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷರನ್ನು ಪುಸ್ತಕದಿಂದ ತುಲಾಭಾರ ಮಾಡಲಾಯಿತು.

English summary
The two days Udupi District Kannada Sahitya Sammelan being held at Poornaprajna College Auditorium, Udupi concluded on Saturday, June 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X