ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ?

|
Google Oneindia Kannada News

ಬೆಂಗಳೂರು, ಜು. 30 : ಕರ್ನಾಟಕ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ನೀಡುವ ಪ್ರಕ್ರಿಯೆಗಳಿಗೆ ಚಾಲನೆ ದೊರಕಿದ್ದು, ನಾಯಕರು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಕೇಶವ ಕೃಪಾದಲ್ಲಿ ಆರ್ ಎಸ್ಎಸ್ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಡಿಯೂರಪ್ಪ ಹೆಸರನ್ನು ಸೂಚಿಸಿ ಪಕ್ಷದ ವರಿಷ್ಠರಿಗೆ ಕಳುಹಿಸಿಕೊಡುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

Yeddyurappa

ಆದರೆ, ಈ ಸಭೆಯಲ್ಲಿ ಅಂತಿಮ ನಿರ್ಧಾರವನ್ನು ಕೈಗೊಂಡಿಲ್ಲ. ಸೆಪ್ಟೆಂಬರ್ ಮೊದಲ ವಾರದಲ್ಲಿ ಹುಬ್ಬಳ್ಳಿ ಅಥವಾ ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ನಾಯಕರು ತೀರ್ಮಾನ ಕೈಗೊಂಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಹ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. [ಯಡಿಯೂರಪ್ಪಗೆ ನ್ಯಾಯ ಸಿಗಬೇಕು!]

ಶಿವಮೊಗ್ಗ ಕ್ಷೇತ್ರದ ಸಂಸದರಾಗಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ಭ್ರಷ್ಟಾಚಾರ ಆರೋಪಗಳ ಹಿನ್ನಲೆಯಲ್ಲಿ ಕೇಂದ್ರದಲ್ಲಿ ಸಚಿವ ಸ್ಥಾನ ದೊರಕಿಲ್ಲ. ಆದ್ದರಿಂದ ಅವರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಲಾಗುತ್ತದೆ ಎಂಬ ಮಾತು ಹಲವಾರು ದಿನಗಳಿಂದ ಪಕ್ಷದ ವಲಯದಲ್ಲಿ ಹರಿದಾಡುತ್ತಿದೆ. ಸದ್ಯ, ಅಧಿವೇಶನ ಮುಕ್ತಾಯವಾದ ನಂತರ ಈ ಕುರಿತ ಪ್ರಕ್ರಿಯೆಗಳಿಗೆ ಚಾಲನೆ ಸಿಕ್ಕಿದೆ. [ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಗಳು ಅಂತಿಮ]

ಉಸ್ತುವಾರಿಗಳ ನೇಮಕ : ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಈಗಾಗಲೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಿರುವ ಕರ್ನಾಟಕ ಬಿಜೆಪಿ ಮೂರು ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಶಿಕಾರಿಪುರ ಕ್ಷೇತ್ರಕ್ಕೆ ಕೆ.ಎಸ್.ಈಶ್ವರಪ್ಪ, ಚಿಕ್ಕೋಡಿ-ಸದಲಗಾ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಮತ್ತು ಬಳ್ಳಾರಿ ಗ್ರಾಮಾಂತರ ಕ್ಷೇತ್ರಕ್ಕೆ ಆರ್.ಅಶೋಕ್ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಅಭ್ಯರ್ಥಿಗಳು : ಶಿಕಾರಿಪುರ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ, ಬಳ್ಳಾರಿ ಗ್ರಾಮಾಂತರ ಕ್ಷೇತ್ರಕ್ಕೆ ಓಬಳೇಶ್‌ ಮತ್ತು ಚಿಕ್ಕೋಡಿ-ಸದಲಗಾ ಕ್ಷೇತ್ರಕ್ಕೆ ಮಹಾಂತೇಶ ಕವಟಗಿ ಮಠ ಅವರು ಅಭ್ಯರ್ಥಿಗಳಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ.

English summary
Karnataka BJP president Prahlad Joshi and Senior leader K.S. Eshwarappa met Rashtriya Swayamsevak Sangh (RSS)leaders on Tuesday and discuss about appoint B.S. Yeddyurappa as state BJP president.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X