ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ ಹೋಟೆಲಿನಲ್ಲಿ ಬೆಂಕಿ, ಒಬ್ಬ ಸಾವು

By Mahesh
|
Google Oneindia Kannada News

ಮುಂಬೈ, ಆ.8: ನವಿ ಮುಂಬೈನ ವಾಶಿ ಪ್ರದೇಶದಲ್ಲಿರುವ ಹೋಟೆಲ್ ವಾಂಟನ್‌ಹೌಸ್‌ನಲ್ಲಿ ಇಂದು ಸಂಭವಿಸಿದ ಭಾರಿ ಅಗ್ನಿ ಅನಾಹುತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಗೊಂಡವರ ಪೈಕಿ 20 ಜನರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಇನ್ನು ಹೆಚ್ಚುವ ಸಾಧ್ಯತೆಯಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಮೂರು ಅಂತಸ್ತಿನ ವಾಂಟನ್‌ಹೌಸ್‌ನಲ್ಲಿ ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಅಗ್ನಿ ದುರಂತ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.

ವಾಶಿ ಪ್ರದೇಶದ ಬೀಚ್ ರಸ್ತೆಯಲ್ಲಿರುವ ಈ ಹೋಟೆಲ್‌ನಲ್ಲಿ ಬೆಳಗ್ಗೆ ನೋಡನೋಡುತ್ತಿದ್ದಂತೆ ಭಾರಿ ಬೆಂಕಿಯ ಕೆನ್ನಾಲಿಗೆಗಳು ಮುಗಿಲು ಮುಟ್ಟಿ ಏಳತೊಡಗಿದವು. ಸುಮಾರು ಬೆಳಗ್ಗೆ 5 ಗಂಟೆ ವೇಳೆಗೆ ಬೆಂಕಿ ಅನಾಹುತದ ಬಗ್ಗೆ ಕರೆ ಬಂತು. ಹೋಟೆಲ್‌ನಲ್ಲಿ ಗಣನೀಯ ಪ್ರಮಾಣದಲ್ಲಿ ವಿದೇಶಿ ಪ್ರವಾಸಿಗರಿದ್ದರು. ಕರೆ ಬಂದ ತಕ್ಷಣ 8 ಅಗ್ನಿಶಾಮಕ ಯಂತ್ರಗಳು, ನೀರಿನ ಟ್ಯಾಂಕರ್‌ಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ

ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ

ಹೋಟೆಲಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಲ್ಲಿ ತುರ್ತು ನಿಗಾ ಘಟಕದಲ್ಲಿರಿಸಿದ್ದು, ಹಲವರ ಸ್ಥಿತಿಗತಿಯ ಬಗ್ಗೆ ವೈದ್ಯರು ಇನ್ನೂ ಏನೂ ಹೇಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ

ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ

ಕರೆ ಬಂದ ತಕ್ಷಣ 8 ಅಗ್ನಿಶಾಮಕ ಯಂತ್ರಗಳು, ನೀರಿನ ಟ್ಯಾಂಕರ್‌ಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಂಟನ್‌ಹೌಸ್‌ ಹೋಟೆಲ್‌

ವಾಂಟನ್‌ಹೌಸ್‌ ಹೋಟೆಲ್‌

ವಾಶಿ ಪ್ರದೇಶದ ಬೀಚ್ ರಸ್ತೆಯಲ್ಲಿರುವ ವಾಂಟನ್‌ಹೌಸ್‌ ಹೋಟೆಲ್‌ನಲ್ಲಿ ಬೆಳಗ್ಗೆ ನೋಡನೋಡುತ್ತಿದ್ದಂತೆ ಭಾರಿ ಬೆಂಕಿಯ ಕೆನ್ನಾಲಿಗೆಗಳು ಮುಗಿಲು ಮುಟ್ಟಿ ಏಳತೊಡಗಿದವು.

ನವಿ ಮುಂಬೈನ ವಾಶಿ ಪ್ರದೇಶದಲ್ಲಿ ಘಟನೆ

ನವಿ ಮುಂಬೈನ ವಾಶಿ ಪ್ರದೇಶದಲ್ಲಿ ಘಟನೆ ನಡೆದ ಘಟನೆ ಬಗ್ಗೆ ಟ್ವೀಟ್

English summary
One person was killed and 30 others were injured in a major fire at a hotel in Navi Mumbai’s Vashi area early this morning, civic officials said. Out of the 30 injured, 20 people are reported to be in a serious condition, they said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X