ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ದಸರಾಕ್ಕೆ ಅದ್ದೂರಿ ಚಾಲನೆ

|
Google Oneindia Kannada News

ಮೈಸೂರು, ಸೆ. 25 : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಚಾಮುಂಡಿ ಬೆಟ್ಟದಲ್ಲಿ ಗುರುವಾರ ಬೆಳಗ್ಗೆ 2014ರ ದಸರಾವನ್ನು ಉದ್ಘಾಟಿಸಿದರು. ಕಾರ್ನಾಡ್‌ ದಸರಾ ಉದ್ಘಾಟಿಸಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಗುರುವಾರ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಗಿರೀಶ್ ಕಾರ್ನಾಡ್, ಸಿಎಂ ಸಿದ್ದರಾಮಯ್ಯ ಮುಂತಾದವರು ಮೊದಲು ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ದೇವಾಲಯದ ಆವರಣದ ವೇದಿಕೆಯಲ್ಲಿದ್ದ ಬೆಳ್ಳಿರಥದಲ್ಲಿದ್ದ ಚಾಮುಂಡಿ ದೇವಿಯ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ 2014ರ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. [ಮೈಸೂರು ದಸರಾ ಚಿತ್ರಗಳನ್ನು ನೋಡಿ]

Chamundi Hill

ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ ಪ್ರಸಾದ್, ಸಚಿವೆ ಉಮಾಶ್ರೀ, ಸಿದ್ದರಾಮಯ್ಯ ಸಂಪುಟದ ಹಲವು ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹತ್ತು ದಿನಗಳ ದಸರಾ ಮಹೋತ್ಸವಕ್ಕೆ ಈ ಮೂಲಕ ಚಾಲನೆ ನೀಡಲಾಗಿದ್ದು, ದಸರಾದ ಹಲವು ಕಾರ್ಯಕಮಗಳು ಇಂದು ಸಂಜೆಯ ತನಕ ಮೈಸೂರಿನಲ್ಲಿ ಉದ್ಘಾಟನೆಗೊಳ್ಳಲಿವೆ.

ಪ್ರತಿಭಟನಾಕಾರರ ಬಂಧನ : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ದಸರಾವನ್ನು ಉದ್ಘಾಟನೆ ಮಾಡಬಾರದು ಎಂದು ವೇದಿಕೆಯ ಬಳಿ ಅವರಿಗೆ ಕಪ್ಪುಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. [ದಸರಾ ಉದ್ಘಾಟನೆ: ಕಾರ್ನಾಡ್ ಬೇಡ, ಭೈರಪ್ಪ ಇರಲಿ]

ಸಿದ್ದರಾಮಯ್ಯ ಮಾತು : ದಸರಾ ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗಿರೀಶ್ ಕಾರ್ನಾಡ್‌ ಆಸ್ತಿಕರೋ? ನಾಸ್ತಿಕರೋ ಎಂಬ ವಾದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಚರ್ಚೆ ನಡೆಸುವುದು ಬೇಡ, ರಾಜ್ಯದ ಎಲ್ಲಾ ಜಿಲ್ಲೆಗಳ ಜನರು ಮೈಸೂರಿಗೆ ಬಂದು ದಸರಾ ಸಂಭ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. [ದಸರಾ ಮಾಹಿತಿ ಇಲ್ಲಿದೆ ನೋಡಿ]

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಉಂಟಾಗಿದೆ. ಆದರೆ, ನಾಡಹಬ್ಬ ಆಚರಣೆಯನ್ನು ನಿಲ್ಲಿಸಲಾಗುವುದಿಲ್ಲ ಆದ್ದರಿಂದ ಆಚರಣೆ ಮಾಡಲಾಗುತ್ತಿದೆ ಎಂದರು. ರಾಜ್ಯದ ಎಲ್ಲಾ ಜನರಿಗೂ ಅವರು ದಸರಾ ಶುಭಾಶಯ ಕೋರಿದರು.

English summary
Jnanpith awardee Girish Karnad inaugurates Mysore Dasara 2014 in Chamundi Hill on Thursday, September 25. Chief Minister Siddharamaiah, District in-Charge Minister V. Sreenivasa Prasad other leaders will present on the occasion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X