ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಬಿಸಿಎಂ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ

By Srinath
|
Google Oneindia Kannada News

Mysore Periyapatna BCM girls hostel application invited
ಮೈಸೂರು, ಮೇ 28: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಿಂದುಳಿದ ವರ್ಗಗಳ ಕಚೇರಿಯು ಪಿರಿಯಾಪಟ್ಟಣ, ಹುಣಸವಾಡಿ, ಹಾರನಹಳ್ಳಿ, ಕೋಮಲಾಪುರ, ಬೆಟ್ಟದಹಳ್ಳಿ ಹಾಗೂ ಕಿತ್ತೂರಿನಲ್ಲಿರುವ ಬಿಸಿಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಮತ್ತು ಪಿರಿಯಾಪಟ್ಟಣದಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಹಿಂದುಳಿದ ವರ್ಗ-೧, ೨ಎ, ೨ಬಿ, ೩ಎ, ೩ಬಿ, ಎಸ್ಸಿ ಹಾಗೂ ಎಸ್ಟಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಊಟ, ಲೇಖನ ಸಾಮಾಗ್ರಿ, ನೋಟ್ ಪುಸ್ತಕ, ಸಮವಸ್ತ್ರ, ಬಟ್ಟೆ ಸೋಪು, ಮೈಸೋಪು, ಕೊಬ್ಬರಿ ಎಣ್ಣೆ, ಟೂತ್ ಪೇಸ್ಟ್ ನೀಡಲಾಗುವುದು. ಪ್ರವೇಶ ಪಡೆಯಲು 5 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.

ಪ್ರವರ್ಗ ೨ಎ, ೨ಬಿ, ೩ಎ, ೩ಬಿ ವರ್ಗದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ 44,500 ರೂ, ಪ್ರವರ್ಗ-೧ಕ್ಕೆ ಸೇರಿದ ವಿದ್ಯಾರ್ಥಿಗಳ ೧ ಲಕ್ಷ ರೂ. ಹಾಗೂ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ 2 ಲಕ್ಷ ರೂ. ಒಳಗಿರಬೇಕು.

ಅರ್ಜಿಯನ್ನು ಸಂಬಂಧಿಸಿದ ವಿದ್ಯಾರ್ಥಿನಿಲಯಗಳಿಂದ ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರಿಗೆ 2014ರ ರ ಜೂನ್ 12 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವಿಸ್ತರಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪಿರಿಯಾಪಟ್ಟಣ ತಾಲ್ಲೂಕು ಇವರನ್ನು ಸಂಪರ್ಕಿಸಬಹುದು. (ಕರ್ನಾಟಕ ವಾರ್ತೆ)

English summary
Applications are invited for Backward Classes and Minorities girls Pre Matric hostel in Periyapatna in Mysore district. June 12th last date for the submission application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X