ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಸಿಎಂ ಅಭ್ಯರ್ಥಿ

|
Google Oneindia Kannada News

ನವದೆಹಲಿ, ಅ.5 : ನವದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ತಮ್ಮ ಸಿದ್ಧತೆ ಆರಂಭಿಸಿವೆ. ಅರವಿಂದ್ ಕೇಜ್ರಿವಾಲ್ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಆಮ್ ಆದ್ಮಿ ಪಕ್ಷ ಶನಿವಾರ ಘೋಷಿಸಿದೆ.

ಡಿಸೆಂಬರ್ 4 ರಂದು ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಈ ಮೂಲಕ ಪಕ್ಷ ಚುನಾವಣೆಗೆ ಸಿದ್ಧತೆ ಪ್ರಾರಂಭಿಸಿದೆ.

Arvind Kejriwal

ಶನಿವಾರ ಪಕ್ಷದ ಮುಖಂಡ ಯೋಗೇಂದ್ರ ಯಾದವ್ ಅವರು, ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಭರವಸೆಯುಳ್ಳ ವ್ಯಕ್ತಿಯೊಬ್ಬರು ದೊರೆತ್ತಿದ್ದು, ನಾವು ಅರವಿಂದ್ ಕೇಜ್ರಿವಾಲ್ ಅವರನ್ನು ಆಯ್ಕೆ ಮಾಡಿದ್ದೇವೆ ಎಂದು ಹೇಳಿದರು. (ಚುನಾವಣಾ ವೇಳಾಪಟ್ಟಿ)

ಅರವಿಂದ್ ಕೇಜ್ರಿವಾಲ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ರಾಜ್ಯದಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸಲು ವಿಫಲಾಗಿವೆ ಎಂದು ಆರೋಪಿಸಿದರು.

ನಮ್ಮ ಎಎಪಿ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಖಂಡಿತವಾಗಿಯೂ ಜನಲೋಕಪಾಲ್ ಬಿಲ್ ಅನ್ನು ಜಾರಿಗೆ ತರುತ್ತೇವೆ ಎಂದ ಕೇಜ್ರಿವಾಲ್, ಚುನಾವಣಾ ಪ್ರಚಾರ ಕಾರ್ಯದಲ್ಲೂ ಇದನ್ನು ಜನರಿಗೆ ತಿಳಿಸಿ, ಮತ ಕೇಳುತ್ತೇವೆ ಎಂದರು. (ಶೀಲಾ ದೀಕ್ಷಿತ್ ವಿರುದ್ಧ ಕೇಜ್ರೀವಾಲ್ ಕಣಕ್ಕೆ?)

ಶುಕ್ರವಾರ ಕೇಂದ್ರ ಚುನಾವಣಾ ಆಯೋಗ ದೆಹಲಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸಿದೆ. ಡಿಸೆಂಬರ್ 4 ರಂದು ದೆಹಲಿಯಲ್ಲಿ ಚುನಾವಣೆ ನಡೆಯಲಿದ್ದು, ಡಿ.8 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

English summary
The Aam Aadmi Party will field its National Convener Arvind Kejriwal as the chief ministerial candidate for the upcoming Delhi elections to be held on December 04, AAP member Yogendra Yadav said on Saturday, October 5.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X