ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್ 6ರವರೆಗೆ ಕೇಜ್ರಿವಾಲ್ ಗೆ ನ್ಯಾಯಾಂಗ ಬಂಧನ

|
Google Oneindia Kannada News

ನವದೆಹಲಿ, ಮೇ 23 : ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜೂನ್ 6 ರವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ಇನ್ನೂ 14 ದಿನಗಳ ಕಾಲ ಕೇಜ್ರಿವಾಲ್ ಜೈಲಿನಲ್ಲಿಯೇ ಇರಬೇಕಾಗುತ್ತದೆ.

ಶುಕ್ರವಾರ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ, ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಗೆ ಹಾಜರುಪಡಿಸಲಾಯಿತು. ಕೋರ್ಟ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜೂನ್ 6ರವರೆಗೆ ವಿಸ್ತರಿಸಿ ಆದೇಶ ನೀಡಿತು.

Arvind Kejriwal

ಬಿಜೆಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಸಲ್ಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ಜಾಮೀನು ಪಡೆಯಲು ನಿರಾಕರಿಸಿದ್ದರು. ಆದ್ದರಿಂದ ಅವರನ್ನು ಎರಡು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಪಟಿಯಾಲಾ ಕೋರ್ಟ್ ಬುಧವಾರ ಆದೇಶ ನೀಡಿತ್ತು ಇಂದು ಅದನ್ನು ಜೂನ್ 6ರವರೆಗೆ ವಿಸ್ತರಿಸಲಾಗಿದ್ದು, ಅಂದು ಮುಂದಿನ ವಿಚಾರಣೆ ನಡೆಯಲಿದೆ. [ಕೇಜ್ರಿವಾಲ್ ಗೆ ನ್ಯಾಯಾಂಗ ಬಂಧನ]

ಏನಿದು ಪ್ರಕರಣ : ಭಾರತದ ಅತ್ಯಂತ ಭ್ರಷ್ಟ ರಾಜಕಾರಣಿಗಳು ಎಂಬ ಹೆಸರಿನಲ್ಲಿ ಪಟ್ಟಿ ಬಿಡುಗಡೆ ಮಾಡಿದ್ದ ಕೇಜ್ರಿವಾಲ್ ಅವರು ನಿತಿನ್ ಗಡ್ಕರಿ ವಿರುದ್ಧ ಭೂ ಹಗರಣದ ಆರೋಪ ಮಾಡಿದ್ದರು. ಅರವಿಂದ್ ಕೇಜ್ರಿವಾಲ್ ಹೇಳಿಕೆ ವಿರುದ್ಧ ನಿತಿನ್ ಗಡ್ಕರಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟಿಗೆ ಹಾಜರಾದ ಕೇಜ್ರಿವಾಲ್ ಅವರು ನಾನು ಆಮ್ ಆದ್ಮಿಯಂತೆ ನಡೆದುಕೊಳ್ಳಬೇಕಾಗುತ್ತದೆ ಹಾಗಾಗಿ ಜಾಮೀನಿಗಾಗಿ ಬಾಂಡ್ ಸಲ್ಲಿಸುವುದಿಲ್ಲ ಎಂದು ಬುಧವಾರ ಹೇಳಿದ್ದರು.

ಆದ್ದರಿಂದ ಅವರನ್ನು ಬುಧವಾರ ಎರಡು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇಂದು ಪ್ರಕರಣ ವಿಚಾರಣೆ ಮುಂದುವರೆಸಿದ ಕೋರ್ಟ್ ಜೂನ್ 6ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಆದ್ದರಿಂದ 14 ದಿನಗಳ ಕಾಲ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿ ಕಾಲಕಳೆಯಬೇಕಾಗಿದೆ.

English summary
Aam Aadmi Party (AAP) National Convener Arvind Kejriwal has been sent to 14-day judicial custody in the defamation case filed by senior Bharatiya Janata Party (BJP) leader Nitin Gadkari. Next hearing on June 6.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X