ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸರ್ಕಾರಿ ನೌಕರರ ಆಸ್ತಿ ಘೋಷಣೆ ಕಡ್ಡಾಯ

|
Google Oneindia Kannada News

ನವದೆಹಲಿ, ಜು. 22 : ಕೇಂದ್ರ ಸರ್ಕಾರಿ ನೌಕರರು ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗಿದೆ. ಕೇಂದ್ರ ಸರ್ಕಾರ ಲೋಕಪಾಲ ಕಾಯ್ದೆ ಅಡಿ ಕೆಲವೊಂದು ನಿಯಮಗಳನ್ನು ರೂಪಿಸಿ ಈ ಕುರಿತು ಅಂತಿಮ ಅಧಿಸೂಚನೆಯನ್ನು ಸೋಮವಾರ ಪ್ರಕಟಿಸಿದೆ.

ಕೇಂದ್ರ ಸರ್ಕಾರದ ಈ ಹೊಸ ಅಧಿಸೂಚನೆಯ ಪ್ರಕರಾರ ಐಎಎಸ್, ಐಎಫ್ಎಲ್, ಐಪಿಎಸ್ ಸೇರಿದಂತೆ 50 ಲಕ್ಷಕ್ಕೂ ಅಧಿಕ ಮಂದಿ ಕೇಂದ್ರ ಸರ್ಕಾರಿ ಆದಾಯ, ಹೂಡಿಕೆ ಕುರಿತ ವಿವರಗಳನ್ನು ಸಲ್ಲಿಸಬೇಕಾಗುತ್ತದೆ. ಹೆಂಡತಿ, ಮಕ್ಕಳ ಹೆಸರಿನಲ್ಲಿರುವ ಆದಾಯವನ್ನು ಸಹ ಘೋಷಿಸಬೇಕಾಗಿದೆ.

money

ಕೈಯಲ್ಲಿರುವ ನಗದು, ಬ್ಯಾಂಕ್ ಠೇವಣಿ, ಬಾಂಡ್, ಡಿಬೆಂಚರ್, ಷೇರು, ಮ್ಯೂಚುಯಲ್ ಫಂಡ್‌ ಗಳಲ್ಲಿನ ಹೂಡಿಕೆ, ವಿಮೆ, ಫ್ರಾವಿಡೆಂಡ್ ಫಂಟ್, ವೈಯಕ್ತಿಕ ಸಾಲ, ಬೇರೆ ವ್ಯಕ್ತಿಗಳಿಗೆ ನೀಡಿರುವ ಸಾಲ ಮುಂತಾದ ವಿವರಗಳನ್ನು ಸಲ್ಲಿಸಬೇಕು. ಉದ್ಯೋಗಿಗಳು ಹೊಸ ನಿಯಮದಂತೆ ಹೊಂದಿರುವ ವಾಹನ ವಾಹನ ಚಿನ್ನಬೆಳ್ಳಿ ಆಭರಣಗಳು, ಗಟ್ಟಿಗಳ ವಿವರಗಳನ್ನು ಘೋಷಿಸಬೇಕು.

ಪ್ರತಿ ವರ್ಷದ ಹಣಕಾಸು ವರ್ಷದ ಆರಂಭ ಮಾರ್ಚ್ 31 ರಲ್ಲಿ ಆಸ್ತಿ ದಾಖಲೆಗಳನ್ನು ಸಲ್ಲಿಸಬೇಕು. ಜುಲೈ 31ರೊಳಗೆ ವಾರ್ಷಿಕ ರಿಟರ್ನ್ಸ್ ಸಲ್ಲಿಸಬೇಕಾಗಿದೆ. ಈಗಾಗಲೇ ಆಸ್ತಿ ಘೋಷಿಸಿಕೊಂಡಿರುವವರು ಸಹ ಹೊಸ ನಿಯಮಾವಳಿ ಪ್ರಕಾರ ಆಸ್ತಿ ವಿವರ ಸಲ್ಲಿಸಬೇಕಿದೆ. [ಐಎಎಸ್, ಕೆಎಎಸ್ ಅಧಿಕಾರಿಗಳು ಆಸ್ತಿ ವಿವರ ಸಲ್ಲಿಸಬೇಕು]

ಸರ್ಕಾರಿ ಸೇವೆಯಲ್ಲಿದ್ದು ಭ್ರಷ್ಟಾಚಾರ ಆರೋಪಕ್ಕೆ ಗುರಿಯಾದಾಗ ಅಂತಹ ಅಧಿಕಾರಿಗಳ ಮೇಲೆ ತನಿಖೆ ನಡೆಸಲು ಈ ಕಾಯ್ದೆ ಅವಕಾಶ ಮಾಡಿಕೊಡುತ್ತದೆ. ಕೇಂದ್ರಾಡಳಿತ ಪ್ರದೇಶ ಹಾಗು ರಾಜ್ಯಗಳಲ್ಲಿ ಲೋಕಪಾಲ ರಚನೆಗೆ ಲೋಕಪಾಲ್ ಹಾಗೂ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ತನಿಖೆ ನಡೆಸಬಹುದಾಗಿದೆ. ಜನವರಿ 1 ರಂದು ಈ ಕಾಯ್ದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದರು.

English summary
All central government employees will now have to declare their immovable/movable assets and liabilities as well as those of their spouses and dependents by July 31 every year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X