ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿಕಾರಿಪುರ ಕ್ಷೇತ್ರದತ್ತ ಗೂಳಿಹಟ್ಟಿ ಶೇಖರ್!

|
Google Oneindia Kannada News

ಶಿವಮೊಗ್ಗ, ಜು. 22 : ಮಾಜಿ ಸಚಿವ ಮತ್ತು ಜೆಡಿಎಸ್ ನಾಯಕ ಗೂಳಿಹಟ್ಟಿ ಶೇಖರ್ ಶಿಕಾರಿಪುರದ ಮೇಲೆ ಕಣ್ಣಿಟ್ಟಿದ್ದಾರೆ. ಶಿಕಾರಿಪುರ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಸಿದ್ಧತೆ ಆರಂಭಿಸಿದ್ದು, ಜೆಡಿಎಸ್ ಟಿಕೆಟ್ ನೀಡದಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗೂಳಿಹಟ್ಟಿ ಶೇಖರ್ ಸೋಲು ಅನುಭವಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದರು. ಸದ್ಯ ಶಿಕಾರಿಪುರದಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸಿಸುವ ಉತ್ಸಾಹದೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ಆರಂಭಿಸಿದ್ದಾರೆ.

Goolihatti Shekar

"ತಮ್ಮ ಒಂದು ಕಣ್ಣು ಹೋದರೂ ಪರವಾಗಿಲ್ಲ, ಇನ್ನೊಬ್ಬರ ಎರಡು ಕಣ್ಣು ಹೋಗಲಿ ಎಂದು ಶಿಕಾರಿಪುರದಲ್ಲಿ ಕಣಕ್ಕಿಳಿಯಲು ನಿರ್ಧಿಸಿದ್ದೇನೆ. ನಾನು ಗೆಲ್ಲದಿದ್ದರೂ ಪರವಾಗಿಲ್ಲ ಒಬ್ಬರು ಅಭ್ಯರ್ಥಿಯನ್ನು ಮಾತ್ರ ಸೋಲಿಸುತ್ತೇನೆ" ಎನ್ನುವ ನಂಬಿಕೆಯಿಂದ ಕಣಕ್ಕಿಳಿಯುತ್ತಿದ್ದೇನೆ ಎಂದು ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. [ಚುನಾವಣಾ ಕಣಕ್ಕೆ ಬಿ.ಸಿ.ಪಾಟೀಲ್?]

2013ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು 15,000 ಮತಗಳನ್ನು ಪಡೆದಿದ್ದ ಜೆಡಿಎಸ್ ಅಭ್ಯರ್ಥಿ ಎಚ್.ಟಿ.ಬಳಿಗಾರ್ ಈ ಬಾರಿಯೂ ಚುನಾವಣೆಗೆ ಸ್ಪರ್ಧಿಸುವ ಉತ್ಸಾಹದಲ್ಲಿದ್ದಾರೆ. ಸದ್ಯ ಗೂಳಿಹಟ್ಟಿ ಪ್ರವೇಶವಾಗಿರುವುದು ಹೊಸ ಗೊಂದಲ ಹುಟ್ಟು ಹಾಕಿದೆ. ಜೆಡಿಎಸ್ ಟಿಕೆಟ್ ನೀಡದಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಅವರು ನಿರ್ಧಿರಿಸಿದ್ದಾರೆ. [ಉಪ ಚುನಾವಣೆ ವೇಳಾಪಟ್ಟಿ]

ರಾಘವೇಂದ್ರ ಆಯ್ಕೆ ಖಚಿತ : ಶಿಕಾರಿಪುರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಂದ ತೆರವಾದ ಸ್ಥಾನಕ್ಕೆ ಬಿ.ವೈ.ರಾಘವೇಂದ್ರ ಅವರನ್ನು ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಶಿಕಾರಿಪುರದಲ್ಲಿ ಸೋಮವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯಲ್ಲಿ ಹಾಜರಿದ್ದ ರಾಘವೇಂದ್ರ ಅವರಿಗೂ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಕಾರ್ಯಕರ್ತರು ಮನವಿ ಮಾಡಿದ್ದಾರೆ. [ಗೂಳಿಹಟ್ಟಿ ಸಿನಿಮಾದ ಚಿತ್ರಗಳು]

ಕಾಂಗ್ರೆಸ್ ಪಕ್ಷದಿಂದ ಉಪ ಚುನಾವಣೆಗೆ ಶಿಕಾರಿಪುರ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಇನ್ನೂ ಖಚಿತವಾದ ಮಾಹಿತಿ ದೊರಕಿಲ್ಲ. ಕಳೆದ ಬಾರಿ ಸ್ಪರ್ಧಿಸಿದ್ದ ಎಚ್.ಎಸ್.ಶಾಂತವೀರಪ್ಪ ಗೌಡ ಮತ್ತು ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ.ಪಾಟೀಲ್ ಹೆಸರು ಕೇಳಿಬರುತ್ತಿದೆ. ಆ.21ರಂದು ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ.

English summary
Former minister Goolihatti Shekar wish to contest for by election form Shikaripura constituency as JDS or independent candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X