ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಇಲ್ಲ

|
Google Oneindia Kannada News

ನವದೆಹಲಿ, ಜೂ. 10 : "ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಬಗ್ಗೆ ನಾವು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮಂಡಳಿ ರಚನೆಯ ಪ್ರಸ್ತಾಪ ನಮ್ಮ ಮುಂದಿಲ್ಲ" ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ. ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುವಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಕರ್ನಾಟಕದ ಸರ್ವಪಕ್ಷಗಳ ನಿಯೋಗ ಮಾಡಿದ ಮನವಿಗೆ ಪ್ರಧಾನಿ ಈ ಸ್ಪಷ್ಟನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ವಪಕ್ಷಗಳ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಮಂಗಳವಾರ ಮಧ್ಯಾಹ್ನ ಭೇಟಿಯಾಗಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ಮನವಿ ಸಲ್ಲಿಸಿದರು. ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ದೊರಕಿದ್ದು, ಯಾವುದೇ ಕಾರಣಕ್ಕೂ ರೈತರ ಹಿತಕ್ಕೆ ಧಕ್ಕೆಯಾಗುವಂತಹ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ.

ಪ್ರಧಾನಿ ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ವಿಚಾರದ ಹಿನ್ನಲೆಯಲ್ಲಿ, ಮಂಡಳಿ ರಚನೆ ಮಾಡದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು. [ಕಾವೇರಿ ವಿವಾದದ ಕುರಿತು ಸರ್ವಪಕ್ಷ ಸಭೆ]

ಕಾವೇರಿ ನದಿ ನೀರು ಹಂಚಿಕೆ ವಿವಾದದ ಕುರಿತು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಆದ್ದರಿಂದ ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಲಾಗದು. ಅಲ್ಲದೇ, ಮಂಡಳಿ ರಚನೆ ಮಾಡಿದರೆ ಕರ್ನಾಟಕಕ್ಕೆ ಉಂಟಾಗುವ ತೊಂದರೆ ಬಗ್ಗೆಯೂ ಪ್ರಧಾನಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಮನವಿಗೆ ಪ್ರಧಾನಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಂಡಳಿ ರಚನೆಯ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ, ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾಪವೂ ಇಲ್ಲ ಎಂದು ತಿಳಿಸಿದ್ದಾರೆ ಎಂದರು.

ಸರ್ವ ಪಕ್ಷ ನಿಯೋಗಕ್ಕೆ ಮೋದಿ ಭರವಸೆ

ಸರ್ವ ಪಕ್ಷ ನಿಯೋಗಕ್ಕೆ ಮೋದಿ ಭರವಸೆ

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಬಗ್ಗೆ ನಾವು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮಂಡಳಿ ರಚನೆಯ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಸರ್ವಪಕ್ಷ ನಿಯೋಗಕ್ಕೆ ಸ್ಪಷ್ಟನೆ ನೀಡಿದ್ದಾರೆ. ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುವಂತಹ ಯಾವುದೇ ನಿರ್ಧಾರವನ್ನು ಕೈಗೊಳ್ಳುವುದಿಲ್ಲ ಎಂದು ಪ್ರಧಾನಿ ರಾಜ್ಯದ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ನಿಯೋಗದಲ್ಲಿ 45 ಜನರಿದ್ದರು

ನಿಯೋಗದಲ್ಲಿ 45 ಜನರಿದ್ದರು

ಕರ್ನಾಟಕದಿಂದ ತೆರಳಿದ್ದ ಸರ್ವ ಪಕ್ಷ ನಿಯೋಗದಲ್ಲಿ 45 ನಾಯಕರಿದ್ದರು. ಪ್ರಮುಖವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅನಂತ್‌ ಕುಮಾರ್, ಸದಾನಂದಗೌಡ, ಜಿ.ಎಂ.ಸಿದ್ದೇಶ್ವರ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಅಡ್ವೋಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್, ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಆಡಳಿತ ಹಾಗೂ ಪ್ರತಿಪಕ್ಷಗಳ ನಾಯಕರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪ್ರಧಾನಿ ಭೇಟಿಯಾಗಿದ್ದರು.

ಬೆಳಗ್ಗೆ ಸರ್ವಪಕ್ಷ ಸಭೆ

ಬೆಳಗ್ಗೆ ಸರ್ವಪಕ್ಷ ಸಭೆ

ನವದೆಹಲಿಯ ಕರ್ನಾಟಕ ಭವನದಲ್ಲಿ ಮಂಗಳವಾರ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಸರ್ವಪಕ್ಷಗಳ ಸಭೆ ನಡೆಸಿದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿವಿಧ ಕೇಂದ್ರ ಸಚಿವರು, ಸಂಸದರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ ಒತ್ತಡಕ್ಕೆ ಮಣಿಯಬಾರದು

ರಾಜಕೀಯ ಒತ್ತಡಕ್ಕೆ ಮಣಿಯಬಾರದು

ಸರ್ವ ಪಕ್ಷಗಳ ಸಭೆಯಲ್ಲಿ ತಮಿಳುನಾಡು ರಾಜಕೀಯ ಒತ್ತಡವನ್ನು ಬಳಸಿಕೊಂಡು ಮಂಡಳಿಯ ಮೇಲೆ ಪ್ರಭಾವ ಬೀರಿ ರಾಜ್ಯದ ಪಾಲಿನ ನೀರನ್ನು ಕಬಳಿಸುವ ಆತಂಕವಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಮಂಡಳಿ ರಚನೆ ಮಾಡಬಾರದು. ಮಂಡಳಿ ರಚನೆ ಆದರೆ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಲಿದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಧಾನಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡಲು ತೀರ್ಮಾನ ಕೈಗೊಳ್ಳಲಾಯಿತು.

ಕೇಂದ್ರ ಸಚಿವರ ಭರವಸೆ

ಕೇಂದ್ರ ಸಚಿವರ ಭರವಸೆ

ಕರ್ನಾಟಕ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರುಗಳು ರಾಜ್ಯದ ಹಿತರಕ್ಷಣೆಗೆ ಬದ್ಧವಾಗಿದ್ದೇವೆ. ಯಾವುದೇ ಸಂದರ್ಭದಲ್ಲೂ ಮಂಡಳಿ ರಚನೆಗೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭರವಸೆ ನೀಡಿದರು. ಸಭೆಯಲ್ಲಿ ಮಂಡಳಿ ರಚನೆಯನ್ನು ವಿರೋಧಿಸುವ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು.

English summary
The Center Government has no proposal to constitute the Cauvery Management Board said Prime Minister Narendra Modi. A delegation of State leaders and MPs, cutting across party lines, urge Narendra Modi in New Delhi on Tuesday not to constitute the Cauvery Water Management Board.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X